ಮೋದಿ ಮಂದಿರಕ್ಕೆ ಹೋದರೆ ನಾವು ಮಸೀದಿಗೆ ಹೋಗ್ತಿವಿ: ಒವೈಸಿ!

Published : Jun 01, 2019, 02:33 PM IST
ಮೋದಿ ಮಂದಿರಕ್ಕೆ ಹೋದರೆ ನಾವು ಮಸೀದಿಗೆ ಹೋಗ್ತಿವಿ: ಒವೈಸಿ!

ಸಾರಾಂಶ

ಬಿಜೆಪಿ ವಿರುದ್ಧ ಮತ್ತೆ ಹರಿಹಾಯ್ದ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ| 'ಮೋದಿ ಪ್ರಧಾನಿಯಾಗಿರುವುದರಿಂದ ಮುಸ್ಲಿಮರು ಆತಂಕಪಡಬೇಕಿಲ್ಲ'| 'ಪ್ರಧಾನಿ ಮಂದಿರಕ್ಕೆ ಭೇಟಿ ನೀಡಿದರೆ ನಾವು ಮಸೀದಿಗೆ ಭೇಟಿ ನೀಡುತ್ತೇವೆ'| ಮುಸ್ಲಿಮರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮುಂದುವರೆಸಲು ಕರೆ|

ಹೈದರಾಬಾದ್(ಜೂ.01): ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರ ಪಡೆದಿರುವುದರಿಂದ ದೇಶದ ಮುಸ್ಲಿಮರು ಆತಂಕ ಪಡಬೇಕಿಲ್ಲ ಎಂದು ಎಐಎಂಐಎಂ ಮುಖ್ಯಸ್ಥ, ಸಂಸದ ಅಸದುದ್ದೀನ್ ಒವೈಸಿ ಹೇಳಿದ್ದಾರೆ.

ಸತತ ನಾಲ್ಕನೇ ಬಾರಿ ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ಅಸದುದ್ದೀನ್ ಒವೈಸಿ, ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸಲು ಸಭೆ ಏರ್ಪಡಿಸಿದ್ದರು.

ಈ ವೇಳೆ ಮಾತನಾಡಿದ ಒವೈಸಿ, ಮೋದಿ ಮತ್ತೊಮ್ಮೆ ಪ್ರಧಾನಿಯಾಗಿರುವುದರಿಂದ ಮುಸ್ಲಿಮರು ಆತಂಕ ಪಡಬೇಕಿಲ್ಲ ಎಂದು ಹೇಳಿದರು. ಪ್ರಧಾನಿ ಮಂದಿರಗಳಿಗೆ ಭೇಟಿ ನೀಡುವುದಾದರೆ ನಮಗೆ ಮಸೀದಿಗಳಿಗೆ ಭೇಟಿ ನೀಡುವ ಸ್ವಾತಂತ್ರವಿದೆ ಎಂದು ಒವೈಸಿ ನುಡಿದರು.

ಬಿಜೆಪಿಯ 300 ಸೀಟುಗಳು ನಮ್ಮಿಂದ ನಮ್ಮ ಹಕ್ಕುಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದಿರುವ ಒವೈಸಿ, ಮುಸ್ಲಿಮರು ಆತಂಕಪಡದೇ ತಮ್ಮ ಹಕ್ಕುಗಳಿಗಾಗಿ ಹೋರಾಟ ಮುಂದುವರೆಸಬೇಕು ಎಂದು ಕರೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!
ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ