
ಬೆಂಗಳೂರು : ವಿಶ್ವಸಂಸ್ಥೆಯ ಯೂತ್ ಕರೇಜ್ ಪ್ರಶಸ್ತಿ ವಿಜೇತೆ ಅಶ್ವಿನಿ ಅಂಗಡಿ ಅವರು ಶಿಕ್ಷಕ ಎಂ.ವೀರೇಶ್ ಅವರೊಂದಿಗೆ ಸಪ್ತಪದಿ ತುಳಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಬಸವನಗುಡಿಯ ವಾಸವಿ ಕನ್ವೆನ್ಷನ್ ಹಾಲ್‌ನಲ್ಲಿ ಶುಕ್ರವಾರ ನಡೆದ ವಿವಾಹ ಮಹೋತ್ಸವ ದಲ್ಲಿ ಅಶ್ವಿನಿ ಅಂಗಡಿ ಮತ್ತು ಎಂ.ವೀರೇಶ್ ತಮ್ಮ ಕುಟುಂಬದವರು, ಸ್ನೇಹಿತರು, ಸಹಪಾಠಿಗಳು ಬಂಧು -ಬಳಗದ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟರು.
ಸ್ವತಃ ಅಂಧರಾಗಿದ್ದರೂ ತನ್ನಂತಹ ಅಂಗವಿಕಲರ ಬಾಳಿಗೆ ಬೆಳಕಾಗುವ ಸದುದ್ದೇಶದಿಂದ ‘ಬೆಳಕು ಅಕಾಡೆಮಿ’ ಸ್ಥಾಪಿಸಿ ನಿರಂತರ ಸೇವೆ ಸಲ್ಲಿಸುತ್ತಿರುವ ಅಶ್ವಿನಿ ಅಂಗಡಿ ಅವರು ದಾವಣಗೆರೆ ಜಿಲ್ಲೆಯ ದೊಡ್ಡಬಾತಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ವೀರೇಶ್ ಅವರ ಕೈ ಹಿಡಿದರು. ದಾವಣಗೆರೆ ಮೂಲದವರಾದ ವೀರೇಶ್ ಇಂಗ್ಲಿಷ್ ಎಂಎ ಸ್ನಾತಕೋತ್ತರ ಪದವೀಧರರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.