ಬಿಜೆಪಿ ಮುಖಂಡನ ಮನೆ ಮೇಲೆ ಗ್ರೆನೇಡ್ ದಾಳಿ: ಬೆಚ್ಚಿ ಬಿದ್ದ ರಾಜ್ಯ!

Published : Sep 28, 2018, 10:21 AM IST
ಬಿಜೆಪಿ ಮುಖಂಡನ ಮನೆ ಮೇಲೆ ಗ್ರೆನೇಡ್ ದಾಳಿ: ಬೆಚ್ಚಿ ಬಿದ್ದ ರಾಜ್ಯ!

ಸಾರಾಂಶ

ಬಿಜೆಪಿ ಮುಖಂಡನ ಮನೆ ಮೇಲೆ ಗ್ರೆನೇಡ್ ದಾಳಿ! ಮಧ್ಯರಾತ್ರಿ ಆಗುಂತಕರಿಂದ ಮನೆ ಮೇಲೆ ದಾಳಿ! ಮೀರತ್ ಬಿಜೆಪಿ ಶಾಸಕ ಸಂಗೀತ್ ಸೋಮ್ ಮನೆ ಮೇಲೆ ದಾಳಿ! ಭಯೋತ್ಪಾದಕ ದಾಳಿ ಎಂದು ಖಚಿತಪಡಿಸಿದ ಪೊಲೀಸರು! ಮೀರತ್ ನ ಲಾಲ್  ಕುರ್ತಿ ಪ್ರದೇಶದಲ್ಲಿರುವ ಸಂಗೀತ್ ಸೋಮ್ ಮನೆ

ಮೀರತ್(ಸೆ.28): ಮುಜಾಫರ್ ನಗರ್ ದಂಗೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ಉತ್ತರ ಪ್ರದೇಶ ಮೀರತ್ ಬಿಜೆಪಿ ಶಾಸಕ ಸಂಗೀತ್ ಸೋಮ್ ಅವರ ಮೀರತ್ ನಿಉವಾಸದ ಮೇಲೆ ಅಪರಿಚಿತರಿಂದ ಗ್ರೆನೇಡ್ ದಾಳಿ ನಡೆದಿದೆ.

ನಿನ್ನೆ ಬೆಳಿಗ್ಗೆ ಈ ಘಟನೆ ನಡೆದಿದ್ದು, ಮೀರತ್ ನ ಲಾಲ್  ಕುರ್ತಿ ಪ್ರದೇಶದಲ್ಲಿನ ಶಾಸಕರ ನಿವಾಸದ ಮೇಲೆ ಗ್ರೆನೇಡ್ ದಾಳಿ ನಡೆದಿದೆ. ಅದೃಷ್ಟ ವಶಾತ್ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೋಲೀಸರು ಸ್ಪಷ್ಟಪಡಿಸಿದ್ದಾರೆ.

ಶಾಸಕ ಸಂಗೀತ್ ಸೋಮ್ ಮನೆಗೆ ಆಗಮಿಸಿದ ಕೆಲವೇ ನಿಮಿಷಗಳಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಗ್ರೆನೇಡ್ ದಾಳಿಯಲ್ಲದೇ ಆಗುಂತಕರು ಗುಂಡಿನ ದಾಳಿ ಕೂಡ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

 ದಾಳಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ತನಿಖೆ ಪ್ರಗತಿಯಲ್ಲಿದೆ ಎಂದು ಎಸ್​ಎಸ್​ಪಿ ಅಖಿಲೇಶ್​ ಕುಮಾರ್​ ಹೇಳಿದ್ದು, ಇದು ಭಯೋತ್ಪಾದಕ ಕೃತ್ಯವಲ್ಲ ಎನ್ನುವುದು ಪ್ರಾಥಮಿಕ ತನಿಖೆಯಿಂದ ಸಾಬೀತಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
Video: ಚಲಿಸುವ BMTC ಬಸ್ಸಲ್ಲಿ ಸ್ಟೇರಿಂಗ್ ಹಿಡಿದು ಡ್ರೈವರ್‌ಗಳ ಕಿತ್ತಾಟ; ಪ್ರಯಾಣಿಕರಿಗೆ ಪ್ರಾಣ ಸಂಕಟ!