
ಗುವಾಹಟಿ(ಏ.06): ಅಸ್ಸಾಂನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಗೆ ಕಡಿವಾಣ ಹಾಕುವ ಸಲುವಾಗಿ ಬಿಜೆಪಿ ಸರ್ಕಾರ ಕ್ರಾಂತಿಕಾರಕ ಜನಸಂಖ್ಯಾ ನೀತಿ ರೂಪಿಸುತ್ತಿದ್ದು, ಅದರ ಪರಿಷ್ಕೃತ ಕರಡನ್ನು ಬಿಡುಗಡೆ ಮಾಡಿದೆ. ಆ ಪ್ರಕಾರ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ವ್ಯಕ್ತಿಗಳು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಒಂದು ವೇಳೆ ಶಾಸಕರಾಗಿದ್ದವರು ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದರೆ ಅವರನ್ನು ಅನರ್ಹಗೊಳಿಸಬಹುದು!
ಈ ಪರಿಷ್ಕೃತ ನೀತಿಯನ್ನು ಅಸ್ಸಾಂನ ಆರೋಗ್ಯ ಸಚಿವ ಹಿಮಂತ ಬಿಸ್ವ ಶರ್ಮಾ ಬಿಡುಗಡೆ ಮಾಡಿದ್ದಾರೆ. ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆತ್ತಿರುವವರು ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಂತಿಲ್ಲ ಹಾಗೂ ಸರ್ಕಾರದ ವಿವಿಧ ಉದ್ಯೋಗ ಸೃಷ್ಟಿ ಯೋಜನೆಗಳ ಲಾಭ ಪಡೆಯುವಂತಿಲ್ಲ. ಜತೆಗೆ ಪಂಚಾಯಿತಿ, ನಗರಸಭೆ ಹಾಗೂ ಇತರ ಶಾಸನಬದ್ಧ ಸಮಿತಿಗಳ ಚುನಾವಣೆಗೂ ಸ್ಪರ್ಧಿಸುವಂತಿಲ್ಲ ಎಂದು ಏ.9ರಂದು ಕರಡು ನೀತಿಯನ್ನು ಬಿಡುಗಡೆ ಮಾಡಲಾಗಿತ್ತು. ಅದಕ್ಕೆ ಶಾಸಕರನ್ನೂ ಸೇರಿಸಿ ಪರಿಷ್ಕೃತ ವರದಿ ಬಿಡುಗಡೆ ಮಾಡಲಾಗಿದೆ. ಇದಕ್ಕೆ ಕಾಂಗ್ರೆಸ್ ಹಾಗೂ ಎಐಯುಡಿಎಂಕೆಯಿದ ತೀವ್ರ ವಿರೋಧ ವ್ಯಕ್ತವಾಗಿದೆ.
(ಸಾಂದರ್ಭಿಕ ಚಿತ್ರ )
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.