ಐಟಿ ದಾಳಿಗೆ ನೀವೇ ಕಾರಣವೆಂದು ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರರಿಂದ ಗೂಂಡಾಗಿರಿ

Published : Jan 23, 2017, 02:58 AM ISTUpdated : Apr 11, 2018, 12:48 PM IST
ಐಟಿ ದಾಳಿಗೆ ನೀವೇ ಕಾರಣವೆಂದು ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರರಿಂದ ಗೂಂಡಾಗಿರಿ

ಸಾರಾಂಶ

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ಕಳೆದ ಐಟಿ ದಾಳಿ ನಡೆದಿತ್ತು. ಐಟಿ ದಾಳಿಗೆ ಸನತ್ ಕುಮಾರ್ ಎಂಬುವರು ಕಾರಣವೆಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೋಳಿ, ಬೆಳಗಾವಿ ತಾ.ಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ಪ್ರಣಯ ಶೆಟ್ಟಿ  ಸೇರಿದಂತೆ 25 ಜನರ ಗುಂಪೊಂದು ಮಚ್ಚು ಮತ್ತು ರಾಡ್​ ಹಿಡಿದುಕೊಂಡು ಹೋಗಿ ಸನತ್ ಕುಮಾರ್ ಎಂಬುವರ ಮನೆ ಮೇಲೆ ದಾಳಿ ಮಾಡಿ ಮನೆಯ ಗಾಜು ಪುಡಿ ಪುಡಿ ಮಾಡಿದ್ದಾರೆ.

ಬೆಳಗಾವಿ(ಜ.23): ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ಕಳೆದ ಐಟಿ ದಾಳಿ ನಡೆದಿತ್ತು. ಐಟಿ ದಾಳಿಗೆ ಸನತ್ ಕುಮಾರ್ ಎಂಬುವರು ಕಾರಣವೆಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೋಳಿ, ಬೆಳಗಾವಿ ತಾ.ಪಂ ಅಧ್ಯಕ್ಷ ಶಂಕರಗೌಡ ಪಾಟೀಲ, ಪ್ರಣಯ ಶೆಟ್ಟಿ  ಸೇರಿದಂತೆ 25 ಜನರ ಗುಂಪೊಂದು ಮಚ್ಚು ಮತ್ತು ರಾಡ್​ ಹಿಡಿದುಕೊಂಡು ಹೋಗಿ ಸನತ್ ಕುಮಾರ್ ಎಂಬುವರ ಮನೆ ಮೇಲೆ ದಾಳಿ ಮಾಡಿ ಮನೆಯ ಗಾಜು ಪುಡಿ ಪುಡಿ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಗೋಮಟೇಶ ವಿದ್ಯಾಪೀಠದ ನಿರ್ದೇಶಕರಾದ ಸನತ್ ಕುಮಾರ್‌ಗೆ ಜೀವ ಬೆದರಿಕೆ ಹಾಕುವುದರ ಜೊತೆಗೆ ಸನತ್ ಕುಮಾರ್‌ ಪತ್ನಿ ಭಾಗ್ಯಶ್ರೀ ಮೇಲೂ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಸದ್ಯ 25 ಜನರ ವಿರುದ್ಧ ದೂರು ಟಿಳಕವಾಡಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಕ್ಷದಲ್ಲಿನ ಗೊಂದಲ ಸರಿಯಲ್ಲ, ಎಲ್ಲ ಹಂತದಲ್ಲೂ ಬಗೆಹರಿಯಬೇಕು: ಸಚಿವ ಪ್ರಿಯಾಂಕ್ ಖರ್ಗೆ
ತಿರುವನಂತಪುರ ಪಾಲಿಕೆಗೆ ಬಿಜೆಪಿ ಮೇಯರ್‌: ಇದೇ ಮೊದಲು