
ಹುಬ್ಬಳ್ಳಿ : ರಾಜ್ಯ ವಿಧಾನ ಸಭಾ ಚುನಾವಣಾ ಕಣ ರಂಗೇರುತ್ತಿದ್ದು, ವಿವಿಧ ಪಕ್ಷಗಳ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಚಿಂಚೋಳಿ ಕುಂದಗೋಳದಲ್ಲಿ ನಾಯಕರು ತಮ್ಮ ತಮ್ಮ ಅಭ್ಯರ್ಥಿಗಳ ಮತಯಾಚಿಸುತ್ತಿದ್ದಾರೆ.
ಇತ್ತ ಕುಂದಗೋಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ.
ಡಿ.ಕೆ ಶಿವಕುಮಾರ್ ದೇವಮಾನವನಲ್ಲ, ನಮ್ಮ ಹಾಗೆ ಮನುಷ್ಯ. ನಮ್ಮ ಪಕ್ಷದಲ್ಲಿಯೂ ಕೂಡ ಸಮರ್ಥ ನಾಯಕರಿದ್ದಾರೆ ಎಂದು ಕಿಡಿಕಾರಿದರು.
‘23ಕ್ಕೆ ರಾಜೀನಾಮೆ ನೀಡಲಿದ್ದಾರೆ ಕೈ ಶಾಸಕ’
ಡಿಕೆಶಿ ಬಂದಿದ್ದಾರೆಂದು ನಾವು ಹೆದರಿಲ್ಲ. ನಮ್ಮಲ್ಲಿಯೂ ಅವರಗಿಂತ ಸಮರ್ಥ ನಾಯಕರಿದ್ದಾರೆ. ಅವರನ್ನು ಸರಿಗಟ್ಟುವ ಮುಖಂಡರಿದ್ದಾರೆ. ಮುಂಬೈ ಕರ್ನಾಟಕದಲ್ಲಿ ನಾಯಕರ ಕೊರತೆ ಇಲ್ಲ. ಅವರಷ್ಟೇ ಶಕ್ತಿ, ಯುಕ್ತಿ ಇರುವವರು ಈ ಭಾಗದಲ್ಲಿ ಇದ್ದಾರೆ ಎಂದರು.
ಈಗಾಗಲೇ ಕುಂದಗೋಳ ಕ್ಷೇತ್ರದಲ್ಲಿ ಬಿ.ಎಸ್. ಯಡಿಯೂರಪ್ಪ ನವರ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮೊದಲ ಸುತ್ತಿನ ಮತಯಾಚನೆ ಮುಂದುವರಿಸಿದ್ದಾರೆ. ಈ ಕ್ಷೇತ್ರದಲ್ಲಿ 100ಕ್ಕೆ ನೂರರಷ್ಟು ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ ಎಂದು ಕಟ್ಟಾ ಸುಮ್ರಹ್ಮಣ್ಯ ನಾಯ್ಡು ಭರವಸೆ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.