ಸಕ್ಕರೆ ನಾಡಿನ ಜನರಿಗೆ ಯಾರ ಮೇಲೆ ಅಕ್ಕರೆ? ಬೆಳಗಾವಿಯಲ್ಲಿ ಕಾಂಗ್ರೆಸ್-ಬಿಜೆಪಿ ನೇರ ಹಣಾಹಣಿ

By Suvarna Web DeskFirst Published Feb 16, 2018, 11:26 AM IST
Highlights

18 ವಿಧಾನಸಭಾ ಕ್ಷೇತ್ರಗಳನ್ನು ಬೆಳಗಾವಿ ಹೊಂದಿದೆ. ಈ ಜಿಲ್ಲೆಯಲ್ಲಿ ಎರಡು ಲೋಕಸಭಾ ಕ್ಷೇತ್ರಗಳು ಇವೆ. ಜಿಲ್ಲೆಯಾದ್ಯಂತ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆಯೇ ಹಣಾಹಣಿ ಏರ್ಪಟ್ಟಿದೆ. ಜೆಡಿಎಸ್ ಇಲ್ಲಿ ಲೆಕ್ಕಕ್ಕಿಲ್ಲ. ಜಾರಕಿಹೊಳಿ ಸೋದರರ ನಡುವೆ ನಡೆಯುತ್ತಿರುವ ಕದನ ಏನಾಗಬಹುದು ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಹಾಲಿ ಚಿಕ್ಕೋಡಿ ಲೋಕಸಭಾ ಸದಸ್ಯರಾಗಿರುವ ಪ್ರಕಾಶ್
ಹುಕ್ಕೇರಿ ರಾಜ್ಯ ರಾಜಕಾರಣಕ್ಕೆ ಮರಳುವ ತವಕದಲ್ಲಿದ್ದಾರೆ. ಸಕ್ಕರೆ ಲಾಬಿ  ಯಾರ ಪರವಾಗಿ ಕೆಲಸ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು. ಮೊದಲ ಕಂತಿನಲ್ಲಿ ಗುರುವಾರ 9 ವಿಧಾನಸಭಾ ಕ್ಷೇತ್ರಗಳ ಕುರಿತು ಮಾಹಿತಿ ನೀಡಲಾಗಿತ್ತು. ಎರಡನೇ ಹಂತದಲ್ಲಿ 10 ಕ್ಷೇತ್ರಗಳ ವಿವರ ಇಲ್ಲಿದೆ.

ಬೆಳಗಾವಿ (ಫೆ.16): 18 ವಿಧಾನಸಭಾ ಕ್ಷೇತ್ರಗಳನ್ನು ಬೆಳಗಾವಿ ಹೊಂದಿದೆ. ಈ ಜಿಲ್ಲೆಯಲ್ಲಿ ಎರಡು ಲೋಕಸಭಾ ಕ್ಷೇತ್ರಗಳು ಇವೆ. ಜಿಲ್ಲೆಯಾದ್ಯಂತ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆಯೇ ಹಣಾಹಣಿ ಏರ್ಪಟ್ಟಿದೆ. ಜೆಡಿಎಸ್ ಇಲ್ಲಿ ಲೆಕ್ಕಕ್ಕಿಲ್ಲ. ಜಾರಕಿಹೊಳಿ ಸೋದರರ ನಡುವೆ ನಡೆಯುತ್ತಿರುವ ಕದನ ಏನಾಗಬಹುದು ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಹಾಲಿ ಚಿಕ್ಕೋಡಿ ಲೋಕಸಭಾ ಸದಸ್ಯರಾಗಿರುವ ಪ್ರಕಾಶ್
ಹುಕ್ಕೇರಿ ರಾಜ್ಯ ರಾಜಕಾರಣಕ್ಕೆ ಮರಳುವ ತವಕದಲ್ಲಿದ್ದಾರೆ. ಸಕ್ಕರೆ ಲಾಬಿ  ಯಾರ ಪರವಾಗಿ ಕೆಲಸ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು. ಮೊದಲ ಕಂತಿನಲ್ಲಿ ಗುರುವಾರ 9 ವಿಧಾನಸಭಾ ಕ್ಷೇತ್ರಗಳ ಕುರಿತು ಮಾಹಿತಿ ನೀಡಲಾಗಿತ್ತು. ಎರಡನೇ ಹಂತದಲ್ಲಿ 10 ಕ್ಷೇತ್ರಗಳ ವಿವರ ಇಲ್ಲಿದೆ.

ಕುಡಚಿ (ಮತಗಳು-1,73,353)

ರಾಜೀವ, ಘಾಟಗೆ ಜಿದ್ದಾಜಿದ್ದಿ 

ಹಾಲಿ ಬಿಎಸ್‌ಆರ್ ಕಾಂಗ್ರೆಸ್ ಶಾಸಕ ಪಿ.ರಾಜೀವ ಈಗಾಗಲೇ ಬಿಜೆಪಿಯಲ್ಲಿ  ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಆದರೆ, ಕಳೆದ ಬಾರಿ ಇವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ಮಾಜಿ ಶಾಸಕ ಎಸ್.ಬಿ.ಘಾಟಗೆ  ಮತ್ತೊಮ್ಮೆ ಕಣಕ್ಕಿಳಿಯಲಿದ್ದಾರೆ. ಇಲ್ಲಿ ಪಕ್ಷ ಅದಲು-ಬದಲಾದರೂ  ಕಾಂಗ್ರೆಸ್- ಬಿಜೆಪಿ ನಡುವೆ ಜಿದ್ದಾಜಿದ್ದಿನ ಕದನ ನಡೆಯಲಿದೆ. ಇಲ್ಲಿ ಪರಿಶಿಷ್ಟ ಪಂಗಡ ಹಾಗೂ ಪರಿಶಿಷ್ಟ ಜಾತಿಯ ಮತಗಳೇ ಇಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. 

ಯಮಕನಮರಡಿ (ಮತಗಳು 1,82,000)

ಜಾರಕಿಹೊಳಿ V/S ಜಾರಕಿಹೊಳಿ

ಯಮಕನಮರಡಿ ಎಸ್‌ಟಿ ಮೀಸಲು ಕ್ಷೇತ್ರ. ಪ್ರಭಾವಿ ರಾಜಕೀಯ ಮುಖಂಡ, ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಈ ಕ್ಷೇತ್ರ ಪ್ರತಿನಿಧಿಸುತ್ತಿದ್ದಾರೆ. ಪಕ್ಷ ತೊರೆಯುವುದಿಲ್ಲ ಎಂದು ಸತೀಶ್ ಜಾರಕಿಹೊಳಿ ಅವರು ಪದೇಪದೇ ಹೇಳಿದರೂ ಪಕ್ಷ ತೊರೆವ ವದಂತಿಗಳು ಮಾತ್ರ ಇನ್ನೂ ನಿಂತಿಲ್ಲ. ಈ ನಡುವೆ, ಅವರ ವಿರುದ್ಧ ಸಹೋದರ, ಉದ್ಯಮಿ ಲಖನ್ ಜಾರಕಿಹೊಳಿ ಅವರು ಕಾಂಗ್ರೆಸ್ಸಿನಿಂದ  ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಜಾರಕಿಹೊಳಿ ಸಹೋದರರ ನಡುವೆ ವಾಕ್ಸಮರವೂ ನಡೆದಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಾರುತಿ ಅಷ್ಟಗಿ ಅವರೇ ಬಿಜೆಪಿಯಿಂದ ಅಭ್ಯರ್ಥಿಯಾಗಿ ಈ ಬಾರಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಒಂದು ವೇಳೆ ಸತೀಶ್ ಜಾರಕಿಹೊಳಿ ಕಾಂಗ್ರೆಸ್ಸಿಂದ ಕಣಕ್ಕಿಳಿದಲ್ಲಿ ಅವರ ವಿರುದ್ಧ ಲಖನ್ ಜಾರಕಿಹೊಳಿ ಅವರು ಜೆಡಿಎಸ್ ಅಥವಾ ಬಿಜೆಪಿಯತ್ತ ಮುಖ ಮಾಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. 

ಹುಕ್ಕೇರಿ ಮತಗಳು (1,68,212) 

8 ನೇ ಬಾರಿ ಗೆಲ್ತಾರಾ ಕತ್ತಿ?

ಉಮೇಶ್ ಕತ್ತಿ ಹಾಲಿ ಬಿಜೆಪಿ ಶಾಸಕ. ಅವರು ಸತತ ೭ ಬಾರಿ ಆಯ್ಕೆಯಾಗಿದ್ದು, ೮ನೇ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಕಾಂಗ್ರೆಸ್ಸಲ್ಲಿ ಮಾಜಿ ಸಚಿವ ಎ.ಬಿ. ಪಾಟೀಲ ಹೆಸರು ಮುಂಚೂಣಿ
ಯಲ್ಲಿದೆ. ರಾಜು ಸಿದ್ನಾಳ, ಇಫ್ತಿಯಾಜ್ ಫಿರ್ಜಾದೆ, ಸಂಜು ಬಸ್ತವಾಡ ಪ್ರಬಲ ಆಕಾಂಕ್ಷಿಗಳು. ಇಲ್ಲಿ ಜೆಡಿಎಸ್ ಹೆಸರೇ ಇಲ್ಲ. ಲಿಂಗಾಯತ ಮತಗಳು ಹೆಚ್ಚಿದ್ದು, ಕತ್ತಿ ಗೆಲುವಿಗೆ ಸಹಕಾರಿಯಾಗಿವೆ. ಕತ್ತಿ ಬಿಜೆಪಿ ತೊರೆವರು ಎಂಬ ವದಂತಿಗಳಿದ್ದವು. ಈಗ ಕಡಿಮೆಯಾಗಿವೆ. ಎ.ಬಿ. ಪಾಟೀಲರನ್ನು ಕಣಕ್ಕಿಳಿಸಿ ಲಿಂಗಾಯತ, ಅಲ್ಪಸಂಖ್ಯಾತರ, ದಲಿತ ಮತಗಳಿಗೆ ಕಾಂಗ್ರೆಸ್ ತಂತ್ರ ರೂಪಿಸುತ್ತಿದೆ. 

ಕಾಗೇವಾಡ ಮತಗಳು (1,77,620) 

ಸಂಸದ ಹುಕ್ಕೇರಿ ಭಾರೀ ಪೖಪೋಟಿ 

ಹಾಲಿ ಶಾಸಕ ಭರಮಗೌಡ (ರಾಜು) ಕಾಗೆ ಬಿಜೆಪಿಯಿಂದ ಮತ್ತೆ ಚುನಾವಣೆ  ಕಣಕ್ಕೆ ಇಳಿಯಲಿದ್ದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ತಯಾರಿ ನಡೆಸಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕಾರ್ಯವನ್ನೂ ಕೈಗೊಂಡಿದ್ದಾರೆ. ಕಾಂಗ್ರೆಸ್ ಆಕಾಂಕ್ಷಿಗಳ ಸಂಖ್ಯೆ ಇಲ್ಲಿ ಹೆಚ್ಚಿದೆ. ಕಳೆದ ಬಾರಿ  ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಶ್ರೀಮಂತ ಪಾಟೀಲ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಸ್ಪರ್ಧಿಸಲು ಸಜ್ಜಾಗುತ್ತಿದ್ದಾರೆ. ಕಾಂಗ್ರೆಸ್ ಆಕಾಂಕ್ಷಿಗಳಾಗಿದ್ದ ಶ್ರೀಶೈಲ ತುಗಶೆಟ್ಟಿ ಸೇರಿದಂತೆ  ಹಲವರು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. 

click me!