
ಬೆಂಗಳೂರು (ಅ.22): ಟಿಪ್ಪು ಜಯಂತಿ ಆಚರಣೆಗೆ ಬಿಜೆಪಿ ವಿರೋಧ ಹಿನ್ನೆಲೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾರೇ ವಿರೋಧ ಮಾಡಿದರು ಟಿಪ್ಪು ಜಯಂತಿ ನಡೆದೇ ನಡೆಯುತ್ತೆ ಎಂದು ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಹೇಳಿಕೆ ನೀಡಿದ್ದಾರೆ.
ಸರಕಾರಿ ಕಾರ್ಯಕ್ರಮ ನಡೆಸಲು ಯಾರದ್ದೇ ಅನುಮತಿಯ ಅಗತ್ಯ ಇಲ್ಲ. ಯಡಿಯೂರಪ್ಪ ಟಿಪ್ಪು ವೇಷ ಧರಿಸಿ, ಖಡ್ಗ ಹಿಡಿದು ಟಿಪ್ಪು ಜಯಂತಿ ಆಚರಿಸಿಲ್ವಾ? ಯಡಿಯೂರಪ್ಪ ಕೆಜೆಪಿಯಲ್ಲಿದ್ದಾಗ ಟಿಪ್ಪು ಜಯಂತಿ ಆಚರಿಸಿದ್ದರು. ಅದನ್ನೇಕೆ ಬಿಜೆಪಿಯವರು ವಿರೋಧಿಸುವುದಿಲ್ಲ? ಇಂಥ ರಾಜಕೀಯಕ್ಕೆ ಸೊಪ್ಪು ಹಾಕುವ ಅಗತ್ಯ ಇಲ್ಲ. ಟಿಪ್ಪು ಜಯಂತಿ ವಿರೋಧಿಸುವವರಿಗೆ ಇತಿಹಾಸ ಗೊತ್ತಿಲ್ಲ. ಟಿಪ್ಪು ಜಯಂತಿ ಆಚರಣೆಯಿಂದ ಕಾನೂನು ಸುವ್ಯವಸ್ಥೆ ಹದಗೆಡುವುದಿಲ್ಲ. ಒಂದಿಬ್ಬರ ವಿರೋಧದಿಂದ ಏನೂ ಆಗುವುದಿಲ್ಲ. ಶಿಷ್ಟಾಚಾರದಂತೆ ಆಹ್ವಾನ ಪತ್ರದಲ್ಲಿ ಎಲ್ಲರ ಹೆಸರನ್ನೂ ಹಾಕಿದ್ದಾರೆ. ಯಾರು ಬರುತ್ತಾರೋ ಬರಲಿ. ಬಾರದವರನ್ನು ಕರೆದು ತರಲು ಸಾಧ್ಯವಿಲ್ಲ. ಬರುವುದು, ಬಿಡುವುದು ಅವರವರಿಗೆ ಬಿಟ್ಟ ವಿಚಾರ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.