
ಬುದ್ಧಗಯಾ(ಆ.31) ಮಕ್ಕಳನ್ನು ಬೆತ್ತಲೆಯಾಗಿ ನೃತ್ಯ ಮಾಡಲು ಪ್ರೇರೇಪಿಸುತ್ತಿದ್ದ, ಕೆಲವೊಂದು ಸಂದರ್ಭದಲ್ಲಿ ಅವರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದ ಕಪಟ ಸನ್ಯಾಸಿಯೊಬ್ಬನನ್ನು ಬಂಧಿಸಲಾಗಿದೆ. ಬಾಂಗ್ಲಾದೇಶದಿಂದ ವಲಸೆ ಬಂದಿದ್ದ ಸಂಘಪ್ರಿಯೆ ಸುಜೋಯ್ ಎಂಬಾತನನ್ನು ಬಂಧಿಸಿದ್ದು ಅನೇಕ ಆತಂಕಕಾರಿ ಮಾಹಿತಿಗಳು ಹೊರಬಂದಿವೆ.
ವಿಶೇಷ ತನಿಖಾ ದಳದ ಅಧಿಕಾರಿಗಳು ಪ್ರಜ್ಞಾ ಜ್ಯೋತಿ ಶಾಲೆ ಮತ್ತು ಮೇಡಿಟೇಶನ್ ಸೆಂಟರ್ ನ ಗುರು ಎಂದು ಕರೆಸುಕೊಂಡಿದ್ದ ಸಂಘಪ್ರಿಯೆ ಸುಜೋಯ್ ನನ್ನು ಬಂಧಿಸಿದ್ದಾರೆ.
ನೀರು ಮತ್ತು ಆಹಾರ ನೀಡದೆ ಮಕ್ಕಳನ್ನು ಕೋಣೆಯಲ್ಲಿ ಕೂಡಿಹಾಕಲಾಗುತ್ತಿತ್ತು. ರಾತ್ರಿ ವೇಳೆ ಬೆತ್ತಲೆಯಾಗಿ ನೃತ್ಯ ಮಾಡಲು ೧೫ ವರ್ಷದ ಮಕ್ಕಳಿಗೆ ಒತ್ತಡ ಹೇರಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬುದ್ಧ ಗಯಾದ ಈ ಶಾಲೆಯಿಂ14 ಮಕ್ಕಳ ರಕ್ಷಣೆ ಮಾಡಲಾಗಿದ್ದು ಬಂಧಿತ ಗುರುವಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.