
ಡೆಹ್ರಾಡೂನ್ : 250 ಮೀಟರ್ ಆಳದ ಕಂದಕಕ್ಕೆ ಬಸ್ ಉರುಳಿ ಬಿದ್ದ ಪರಿಣಾಮ 16 ಮಂದಿ ಮೃತಪಟ್ಟಿರುವ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದೆ.
ಉತ್ತರಾಖಂಡ್ ಸಾರಿಗೆ ಇಲಾಖೆಗೆ ಸೇರಿದ ಬಸ್ ರಿಶಿಕೇಶ ಹಾಗೂ ಗಂಗೋತ್ರಿ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಚಾಲಕನ ನಿಯಂತ್ರ ತಪ್ಪಿ ಅತ್ಯಂತ ಆಳದ ಕಂದಕ್ಕೆ ಬಸ್ ಉರುಳಿ ಬಿದ್ದಿದೆ. ಈ ವೇಳೆ ಹಲವರು ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಬಸ್ ನಲ್ಲಿ ಒಟ್ಟು 25 ಮಂದಿ ಪ್ರಯಾಣಿಸುತ್ತಿದ್ದು, ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ನೆರವಿಗೆ ಹೆಲಿಕಾಪ್ಟರ್ ಧಾವಿಸಿ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಇದು ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಹಾಗೂ ಗಾಯಾಳುಗಳ ಕುಟುಂಬಕ್ಕೆ 50 ಸಾವಿರ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ