
ಅಥಣಿ: ಹಲವಾರು ವರ್ಷಗಳಿಂದ ಜನಪರ ಕಾರ್ಯಗಳಿಂದ ಅಥಣಿಯನ್ನು ಬಿಜೆಪಿ ಭದ್ರಕೋಟೆಯನ್ನಾಗಿಸಿದ್ದೇವೆ. ಇಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಷ್ಟೇ ಅಲ್ಲ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರೇ ಸ್ಪರ್ಧಿಸಿದರೂ ಹೆದರುವುದಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಬೆಳಗಾವಿ ಜಿಲ್ಲೆ ಅಥಣಿಯಲ್ಲಿ ಶನಿವಾರ ನಾನಾ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಮುಂದಿನ ಚುನಾವಣೆಗೆ ಅಥಣಿಯಲ್ಲಿ ಕಾಂಗ್ರೆಸ್‌ನಿಂದ ಸ್ಥಳೀಯ, ಜಿಲ್ಲಾ ನಾಯಕರು ಸ್ಪರ್ಧಿಸಲಿ ಅಥವಾ ರಾಜ್ಯ ನಾಯಕರನ್ನೇ ಕರೆತಂದು ಸ್ಪರ್ಧೆಗಿಳಿಸಲಿ. ಆ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧಿಸಿದರೂ ಸ್ವಾಗತಿಸಿ, ಅದನ್ನು ಸವಾಲಾಗಿ ಸ್ವೀಕರಿಸುತ್ತೇನೆ ಎಂದರು.
ಕನ್ನಡಪ್ರಭ ವಾರ್ತೆ
epaper.kannadaprabha.in
(ಲಕ್ಷ್ಮಣ್ ಸವದಿಯವರ ಸಂಗ್ರಹ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.