
ಸಿಂಗಾಪುರ: ವಿದೇಶಗಳಲ್ಲೂ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ನೀತಿಯನ್ನು ಟೀಕಿಸುವ ಸಂಪ್ರದಾಯ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಅಧಿಕಾರಕ್ಕಾಗಿ ಬಿಜೆಪಿ ಜನರನ್ನು ವಿಭಜಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
ತಮ್ಮ ಮೂರು ದಿನಗಳ ಸಿಂಗಾಪುರ, ಮಲೇಷ್ಯಾ ಪ್ರವಾಸದ ಅನ್ವಯ, ಗುರುವಾರ ಇಲ್ಲಿನ ಪ್ರತಿಷ್ಠಿತ ಲೀ ಕೌನ್ ಯೆವ್ ಸ್ಕೂಲ್‌ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಚುನಾವಣೆಗಳನ್ನು ಗೆಲ್ಲಲು, ಜನರನ್ನು ವಿಭಜಿಸುವ ರಾಜಕಾರಣ ವಿವಿಧೆಡೆ ನಡೆಯುವಂತೆ ಭಾರತದಲ್ಲೂ ನಡೆಯುತ್ತಿದೆ. ಬೆದರಿಕೆಯ ಮೂಲಕ ಚುನಾವಣೆಗೆ ಗೆಲ್ಲುವ ಯತ್ನ ನಡೆಯುತ್ತಿದೆ ಎಂದು ಟೀಕಿಸಿದರು.
ಇದೇ ವೇಳೆ ಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಳಕ್ಕೆ ಈಗಿನ ಬಿಜೆಪಿ ಸರ್ಕಾರದ ನೀತಿಗಳೇ ಕಾರಣ. ಮನಮೋಹನ್‌ಸಿಂಗ್ ಅವಧಿಯಲ್ಲಿ ನಾವು ವಿಶೇಷ ಆಸ್ಥೆ ವಹಿಸಿ ರಾಜ್ಯದಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದೆವು. ಆದರೆ ಉಗ್ರರ ವಿರುದ್ಧ ಈಗಿನ ಸರ್ಕಾರ ಕೈಗೊಂಡ ನೀತಿಗಳಿಂದಾಗಿ ಅಲ್ಲಿ ಮತ್ತೆ ಹಿಂಸಾಚಾರ ಹೆಚ್ಚಿದೆ ಎಂದು ಕಿಡಿಕಾರಿದರು.
ತಮ್ಮ ಮೂರು ದಿನಗಳ ಭೇಟಿ ವೇಳೆ ಎರಡೂ ದೇಶಗಳ ರಾಜಕೀಯ ನಾಯಕರು, ಭಾರತೀಯ ಮೂಲದ ಸಿಇಒಗಳು, ಭಾರತೀಯ ಸಮುದಾಯದ ಜನರ ಜೊತೆ ರಾಹುಲ್ ಸಂವಾದ ನಡೆಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.