ಅ.17 ರಂದು ವಿಧಾನಸಭೆಗೆ ಮುತ್ತಿಗೆ: ರೈತಸಂಘ

Published : Oct 05, 2016, 02:26 PM ISTUpdated : Apr 11, 2018, 12:45 PM IST
ಅ.17 ರಂದು ವಿಧಾನಸಭೆಗೆ ಮುತ್ತಿಗೆ: ರೈತಸಂಘ

ಸಾರಾಂಶ

ಚಿತ್ರದುರ್ಗ (ಸೆ.05): ಮುಂದಿನ ವರ್ಷದ ಬಿತ್ತನೆಗೆ ರೈತರಿಗೆ ಉಚಿತ ಬೀಜ, ಗೊಬ್ಬರಗಳನ್ನು ಸರ್ಕಾರದಿಂದ ನೀಡಬೇಕೆಂದು ಆಗ್ರಹಿಸಿ ಅ.17 ರಂದು ವಿಧಾನಸೌಧ ಮುತ್ತಿಗೆ ಹಾಕುವುದಾಗಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್‌ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆ ಸತತ ಬರಗಾಲದಿಂದ ತತ್ತರಿಸಿದರೂ ಸಹ ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸದೆ ಮೂಕ, ಕಿವುಡ, ಜಾಣ ತರಹದ ನಟನೆಯನ್ನು ಮಾಡುತ್ತಿದೆ. ಒಂದು ಕಡೆ ರೈತರಿಗೆ ಬಲವಂತದ ಸಾಲ ವಸೂಲಾತಿ ಮಾಡಬೇಡಿ ಎಂದು ಹೇಳಿದರೂ, ಖಾಸಗಿ, ರಾಷ್ಟ್ರೀಕೃತ ಬ್ಯಾಂಕುಗಳು ಬಲವಂತದಿಂದ ಬೆಳೆ ಸಾಲ, ಟ್ರ್ಯಾಕ್ಟ್ ರಗಳ ಸಾಲ, ಬಂಗರದ ಸಾಲಗಳನ್ನು ವಸೂಲು ಮಾಡುತ್ತಿವೆ.

ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಇರುವುದರಿಂದ ಈಗಾಗಲೇ ದಾವಣಗೆರೆ ಜಿಲ್ಲೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ಕಾಣಿಸಿಕೊಳ್ಳುತ್ತಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲ ಬ್ಯಾಂಕಿನ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!