
ಢಾಕಾ, [ಫೆ.24]: ಡಾಕಾ ಇಂಟರ್ ನ್ಯಾಷನಲ್ ವಿಮಾನ ನಿಲ್ದಾಣದಿಂದ ದುಬೈಗೆಸಂಚರಿಸುತ್ತಿದ್ದ ಬಿಮನ್ ಬಿಜಿ 147 ವಿಮಾನವನ್ನ ಹೈಜಾಕ್ ಮಾಡಲು ಖದೀಮರು ಯತ್ನಿಸಿದ್ದಾರೆ.
ವಿಮಾನದಲ್ಲಿದ್ದ ಒಬ್ಬ ಗನ್ಮ್ಯಾನ್, ವಿಮಾನವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸಿದ ಕಾರಣ ಚಿತ್ತಗಾಂಗ್ನ ಶಾ ಅಮಾನತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಮಾಡಲಾಗಿದೆ ಎಂದು ಬಾಂಗ್ಲಾದೇಶದ ಮಾಧ್ಯಮಗಳು ವರದಿ ಮಾಡಿವೆ.
ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆ ಅಧಿಕಾರಿಗಳು ಅದನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅದರಲ್ಲಿದ್ದ ಎಲ್ಲ ಪ್ರಯಾಣಿಕರನ್ನೂ ಸುರಕ್ಷಿತವಾಗಿ ಇಳಿಸಲಾಗಿದೆ. ಆದರೆ ಆ ಗನ್ಮ್ಯಾನ್ ಏರ್ಪೋರ್ಟ್ ಆಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ