
ನವದೆಹಲಿ(ಅ.18): ಕಾವೇರಿ ಐತೀರ್ಪು ಪ್ರಶ್ನಿಸಿ 4 ರಾಜ್ಯಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್`ನಲ್ಲಿ ನಡೆಯುತ್ತಿದೆ.ಕೇಂದ್ರದ ಪರ ವಾದ ಮಂಡಿಸುತ್ತಿರುವ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ, ಆರ್ಟಿಕಲ್ 32, 131, 136, ಹಾಗೂ 262ರ ಉಲ್ಲೇಖಿಸಿದ್ದು, ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಸಲ್ಲಿರುವ ಅರ್ಜಿಗಳು ವಿಚಾರಣೆಗೆ ಯೋಗ್ಯವಲ್ಲ ಎಂದು ವಾದಿಸಿದ್ದಾರೆ.
ನ್ಯಾಯಾಧಿಕರಣದ ಐತೀರ್ಪು ಕುರಿತಂತೆ ಈಗಾಗಲೇ ಗೆಜೆಟ್ ಅಧಿಸೂಚನೆ ಆಗಿದೆ. ಕೇಂದ್ರದ ಅಧಿಸೂಚನೆ ಸುಪ್ರೀಂಕೋರ್ಟ್ ತೀರ್ಪಿಗೆ ಸಮ. ನ್ಯಾಯಾಧಿಕರಣ ತೀರ್ಪು ಗೆಜೆಟ್ ಅಧಿಸೂಚನೆ ಆಗಿರುವುದರಿಂದ ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಯೋಗ್ಯ ಅಲ್ಲ ಎಂದು ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ವಾದ ಮಂಡಿಸಿದ್ಧಾರೆ. ನ್ಯಾಯಾಧಿಕರಣದ ತೀರ್ಪಿನ ಬಗ್ಗೆ ವಿಚಾರಣೆ ಮಾಡಬಹುದೇ? ತೀರ್ಪು ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮಾಡಬಹುದೇ? ತೀರ್ಪಿನ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ಮಾಡಬಹುದೇ? ಈ ರೀತಿಯ ಮೂಲಭೂತ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ. ಸಂವಿಧಾನದ ಕೆಲ ಮುಖ್ಯವಿಚಾರಗಳು ನಿರ್ಣಯವಾಗಬೇಕು ಎಂದು ಸುಪ್ರೀಂಕೋರ್ಟ್ನಲ್ಲಿ ಎಜಿ ಮುಕುಲ್ ರೋಹ್ಟಗಿ ವಾದಿಸಿದ್ಧಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.