
ಓಸಾಕಾ(ಜೂ.29): ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ, ಆಸ್ಟ್ರೆಲೀಯಾ ಪ್ರಧಾನಿ ಸ್ಕಾಟ್ ಮಾರಿಸನ್ ಕ್ಲಿಕ್ಕಿಸಿರುವ ಸೆಲ್ಫಿ ಇದೀಗ ಭಾರೀ ಸದ್ದು ಮಾಡುತ್ತಿದೆ.
"
ಸಮ್ಮೇಳನದ ಸಭಾಂಗಣದಲ್ಲಿ ಮೋದಿ ಅವರನ್ನು ಕಂಡ ಮಾರಿಸನ್, ಕೂಡಲೇ ತಮ್ಮ ಮೊಬೈಲ್ ಫೋನ್ ಹೊರತೆಗೆದು ಸೆಲ್ಫಿಗಾಗಿ ಬೇಡಿಕೆ ಇಟ್ಟರು. ಆಸೀಸ್ ಪ್ರಧಾನಿ ಜೊತೆ ನಗುನಗುತ್ತಾ ಮೋದಿ ಸೆಲ್ಫಿಗೆ ಪೋಸ್ ನೀಡಿದರು.
ಈ ಫೊಟೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಸ್ಕಾಟ್ ಮಾರಿಸನ್, ಕಿತ್ನಾ ಅಚ್ಛಾ ಹೈ ಮೋದಿ(ಮೋದಿ ಅದೆಷ್ಟು ಒಳ್ಳೆಯವರು) ಎಂದು ಹಿಂದಿಯಲ್ಲಿ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ.
ಮೋದಿ-ಮಾರಿಸನ್ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಎರಡೂ ರಾಷ್ಟ್ರಗಳಲ್ಲಿ ಈ ಫೋಟೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.