ಮಾನವೀಯತೆಯ ಸಾವು;ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ನೆರವಿಗೆ ಯಾರೂ ಬರಲಿಲ್ಲ

Published : Nov 20, 2017, 09:12 AM ISTUpdated : Apr 11, 2018, 12:49 PM IST
ಮಾನವೀಯತೆಯ ಸಾವು;ರಕ್ತದ ಮಡುವಿನಲ್ಲಿ  ಒದ್ದಾಡುತ್ತಿದ್ದರೂ ನೆರವಿಗೆ ಯಾರೂ ಬರಲಿಲ್ಲ

ಸಾರಾಂಶ

ಮೆಜೆಸ್ಟಿಕ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಆಟೋ ವೃದ್ದ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಆಟೋ ಡಿಕ್ಕಿ ಹೊಡೆದ ರಭಸಕ್ಕೆ ಪಾದಚಾರಿಯ ತಲೆಗೆ ತೀವ್ರ ಪೆಟ್ಟಾಗಿದ್ದು ಆತ ಫುಟ್ ಪಾತ್ ಮೇಲೆ ಕುಸಿದು ಬಿಟ್ಟಿದ್ದಾನೆ. ಅಪಘಾತ ನಡೆದ ಕೂಡಲೇ ನಡು ರಸ್ತೆಯಲ್ಲಿ ಆಟೋ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಬೆಂಗಳೂರು (ನ.20): ಮೆಜೆಸ್ಟಿಕ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಆಟೋ ವೃದ್ದ ಪಾದಚಾರಿಗೆ ಡಿಕ್ಕಿ ಹೊಡೆದಿದೆ. ಆಟೋ ಡಿಕ್ಕಿ ಹೊಡೆದ ರಭಸಕ್ಕೆ ಪಾದಚಾರಿಯ ತಲೆಗೆ ತೀವ್ರ ಪೆಟ್ಟಾಗಿದ್ದು ಆತ ಫುಟ್ ಪಾತ್ ಮೇಲೆ ಕುಸಿದು ಬಿಟ್ಟಿದ್ದಾನೆ. ಅಪಘಾತ ನಡೆದ ಕೂಡಲೇ ನಡು ರಸ್ತೆಯಲ್ಲಿ ಆಟೋ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಅರ್ಧ ಗಂಟೆಗಳಿಗೂ ಹೆಚ್ಚು ಕಾಲ ಗಾಯಾಳು ವೃದ್ದ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಯಾರೋಬ್ಬರು ಸಹಾಯಕ್ಕೆ ಧಾವಿಸದೇ ಸಾರ್ವಜನಿಕರು ಮೊಬೈಲ್ ಹಿಡಿದು ವಿಡಿಯೋ ಮಾಡುವುದರಲ್ಲಿ ಬ್ಯುಸಿಯಾಗಿದ್ದು ಅಮಾನವೀಯತೆ ಮರೆತಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಬಂದ ಉಪ್ಪಾರಪೇಟೆ ಪೊಲೀಸರು ಗಾಯಾಳುವನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ವೃದ್ದ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವವಾಗುತ್ತಿದ್ದರಿಂದ  ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಗಾಯಾಳು ಚಿಕಿತ್ಸೆ ಮುಂದುವರೆದಿದ್ದು ಗಾಯಾಳು ವೃದ್ದ ಚನ್ನಪಟ್ಟಣ ಮೂಲದವನೆಂದು ತಿಳಿದು ಬಂದಿದೆ.ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ