
ಬೆಂಗಳೂರು(ಮಾ.06): ಸುವರ್ಣ ನ್ಯೂಸ್ ಸಹಯೋಗದಿಂದಿಗೆ ಕರ್ನಾಟಕ ಸಣ್ಣ ಕೈಗಾರಿಕಗಳ ಸಂಘ ಕಾಸಿಯಾ ಸಂಸ್ಥೆ ಸಣ್ಣ ಮತ್ತು ಮದ್ಯಮ ಕೈಗಾರಿಕಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಉಜ್ವಲ ಉದ್ಯಮಿ ಪ್ರಶಸ್ತಿ ನೀಡಲಿದೆ.
ನಗರದ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಕಾಸಿಯಾ ಸಂಸ್ಥೆಯ ಅಧಿಕಾರಿಗಳು, ರಾಜ್ಯದಲ್ಲಿ ಈಗಿರುವ 8 ಸಾವಿರ ಸಣ್ಣ ಕೈಗಾರಿಕಾ ಸಂಸ್ಥೆಗಳಲ್ಲಿ ಸಾಧನೆ ಮಾಡಿರುವ ಪ್ರಮುಖರಿಗೆ ಉಜ್ವಲ ಉದ್ಯಮಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಣ್ಣ ಕೈಗಾರಿಕ ಉದ್ಯಮಿಗಳಿಗೆ ಉತ್ತೆಜನ ನೀಡಲು ಈ ವಿಭಿನ್ನವಾದ ಕಾರ್ಯ ಮಾಡಲಾಗುತ್ತಿದೆ. ಇದೇ ತಿಂಗಳ 25 ರಂದು ಕಾಸಿಯಾ ಮುಖ್ಯ ಕಛೇರಿಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಉದ್ಯಮಿಗಳು ಸಲ್ಲಿಸಿದ ಅರ್ಜಿಯನ್ನು ಜೂರಿ ಸಮಿತಿ ಪರಿಶೀಲಿಸಲಿದ್ದು, ಆಯ್ಕೆಯಾದ ಉದ್ಯಮಿಗಳಿಗೆ ಕಾಸಿಯಾ ರತ್ನ, ವರ್ಷದ ಸಣ್ಣ ಮತ್ತು ಮಧ್ಯಮ ಕೈಗಾರಿಕೋದ್ಯಮಿ,ವರ್ಷದ ಮಹಿಳಾ ಕೈಗಾರಿಕೋದ್ಯಮಿ ಹೀಗೆ ಹಲವು ವಿಶೇಷ ಪ್ರಶಸ್ತಿಗಳನ್ನ ನೀಡಿ ಗೌರವಿಸಲಾಗುವುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.