ಅಯೋಧ್ಯೆ ಐತಿಹಾಸಿಕ ಮಹಾತೀರ್ಪು : ಎಲ್ಲೆಡೆ ಕಟ್ಟೆಚ್ಚರ

By Kannadaprabha NewsFirst Published Nov 9, 2019, 7:20 AM IST
Highlights

ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಿ ಎಂದು 1885ರಲ್ಲಿ ಮೊದಲ ಬಾರಿ ನ್ಯಾಯಾಲಯದ ಕಟಕಟೆ ಏರಿದ್ದ, ಬಳಿಕದ 134 ವರ್ಷಗಳಲ್ಲಿ ನಾನಾ ಹಂತದ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಗುರಿಯಾಗಿದ್ದ ರಾಮಜನ್ಮಭೂಮಿ- ಬಾಬ್ರಿ
ಮಸೀದಿ ಭೂವಿವಾದ ಕುರಿತ ಐತಿಹಾಸಿಕ ತೀರ್ಪು ಇಂದು ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ

ನವದೆಹಲಿ [ನ.09]:  ಪ್ರದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಿ ಎಂದು 1885ರಲ್ಲಿ ಮೊದಲ ಬಾರಿ ನ್ಯಾಯಾಲಯದ ಕಟಕಟೆ ಏರಿದ್ದ, ಬಳಿಕದ 134 ವರ್ಷಗಳಲ್ಲಿ ನಾನಾ ಹಂತದ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಗುರಿಯಾಗಿದ್ದ ರಾಮಜನ್ಮಭೂಮಿ- ಬಾಬ್ರಿ ಮಸೀದಿ ಭೂವಿವಾದ ಕುರಿತ ಐತಿಹಾಸಿಕ ತೀರ್ಪು ಇಂದು ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ವಿವಾದದ ಕೇಂದ್ರ ಬಿಂದುವಾಗಿರುವ 2.77 ಎಕರೆ ಪ್ರದೇಶದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾ. ಎಸ್.ಎ.ಬೋಬ್ಡೆ, ಡಿ. ವೈ.ಚಂದ್ರಚೂಡ್, ನ್ಯಾ.ಅಶೋಕ್ ಭೂಷಣ್ ಮತ್ತು ಎಸ್.ಅಬ್ದುಲ್ ನಜೀರ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠವು ಪ್ರಕಟಿಸಲಿದೆ.

ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣ ಸಂಬಂಧ 40 ದಿನಗಳ ಕಾಲ ಸರಣಿ ವಿಚಾರಣೆ ನಡೆಸಿದ್ದ ಪೀಠ ನೀಡಲಿರುವ ಈ ಐತಿಹಾಸಿಕ ತೀರ್ಪು, ರಾಮಮಂದಿರ ಕುರಿತ ಎಲ್ಲಾ ವಿವಾದಗಳಿಗೆ ತಾರ್ಕಿಕ ಅಂತ್ಯ ಹಾಡಲಿದೆ ಎಂದು ಹೇಳಲಾಗಿದೆ.

ಕಾರಣ, ಶನಿವಾರ ಹೊರಬೀಳಲಿರುವ ಆದೇಶ ಪಾಲನೆ ಎಲ್ಲಾ ಅರ್ಜಿದಾರ ಪಾಲಿಗೆ ಅನಿವಾರ್ಯ. ಆದರೆ ತೀರ್ಪಿ ನಲ್ಲಿರುವ ಅಡಕಗಳು ಧಾರ್ಮಿಕವಾಗಿ ಮತ್ತು ರಾಜಕೀಯವಾಗಿ ಸೂಕ್ಷ್ಮ ವಿಚಾರವಾಗಿರುವ ಕಾರಣ, ಇದನ್ನು ವಿವಿಧ ರಾಜಕೀಯ ಪಕ್ಷಗಳು, ಧಾರ್ಮಿಕ ಮುಖಂಡರು ಮತ್ತು ಸಂಘಟನೆಗಳು ಹೇಗೆ ಸ್ವೀಕರಿಸುತ್ತವೆ ಎಂಬ ಕುತೂಹಲ ಇದೆ. ಹೀಗಾಗಿ ಎಲ್ಲರ ಕಣ್ಣು ಸುಪ್ರೀಂ ತೀರ್ಪಿನತ್ತ ನೆಟ್ಟಿವೆ. 

ಈ ನಡುವೆ ತೀರ್ಪು ಪ್ರಕಟಣೆಗೆ ಸಮಯ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅಯೋಧ್ಯೆ ಇರುವ ಉತ್ತರಪ್ರದೇಶ ಸೇರಿ ದೇಶಾದ್ಯಂತ ಭಾರಿ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ. ಜೊತೆಗೆ ಅಯೋಧ್ಯೆ ನಗರಿ ಇರುವ ಫೈಜಾ ಸಬಾದ್ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾಜ್ಯದಾದ್ಯಂತ  ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತೀರ್ಪು ಪ್ರಕಟಣೆ ಸಮಯ ಶುಕ್ರವಾರ ತಡರಾತ್ರಿ ವೇಳೆಗೆ ಬಹಿರಂಗಗೊಂಡ ಹಿನ್ನೆಲೆಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

ಪ್ರಕರಣ ಹಿನ್ನೆಲೆ: ಅಯೋಧ್ಯೆ ಭೂವಿವಾದ ಸಂಬಂಧ ಅಲಹಾಬಾದ್ ಹೈಕೋರ್ಟ್ 2010 ರಲ್ಲಿ ತೀರ್ಪು ನೀಡಿತ್ತು. ಅದರಲ್ಲಿ 2.77 ಎಕರೆ ವಿವಾದಿತ ಭೂಮಿಯನ್ನು ಸುನ್ನಿ ವಕ್ಫ್ ಮಂಡಳಿ, ನಿರ್ಮೋಹಿ ಅಖಾಡ, ರಾಮ್ ಲಲ್ಲಾಗೆ ಸಮನಾಗಿ ಹಂಚಲಾಗಿತ್ತು. ಆದರೆ ಇದನ್ನು
ಪ್ರಶ್ನಿಸಿ ಸುಪ್ರೀಂಕೋರ್ಟ್ 1 ಮೇಲ್ಮನವಿ ಅರ್ಜಿಗಳು  ಸಲ್ಲಿಕೆಯಾಗಿದ್ದವು. ಈ ಕುರಿತು ವಿಚಾರಣೆ ನಡೆಸಿದ್ದ  ಸಾಂವಿಧಾನಿಕ ಪೀಠ ಶನಿವಾರ ತನ್ನ ತೀರ್ಪು ಪ್ರಕಟಿಸಲಿದೆ.

ತುರ್ತು ಸಭೆ: ಇದಕ್ಕೂ ಮುನ್ನ ಶುಕ್ರವಾರ ಸುಪ್ರೀಂ ಕೋಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಶುಕ್ರವಾರ, ಉತ್ತರಪ್ರದೇಶದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾ ನಿರ್ದೇಶಕರ ಜೊತೆ ಸಮಾಲೋಚನೆ ನಡೆಸಿದ್ದರು. ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ತಿವಾರಿ ಮತ್ತು ಡಿಜಿಪಿ ಓಂ ಪ್ರಕಾಶ್‌ಸಿಂಗ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿಗಳು ಸುಮಾರು ಒಂದೂವರೆ ಗಂಟೆ ಕಾಲ ಇಬ್ಬರು ಅಧಿಕಾರಿ ಗಳಿಂದ ರಾಜ್ಯದಲ್ಲಿನ ಭದ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ರಾಜ್ಯ ಸರ್ಕಾರ ಕೈಗೊಂಡಿರುವ ಭದ್ರತಾ ವ್ಯವಸ್ಥೆ, ತೀರ್ಪು ಪ್ರಕಟವಾದ ಬಳಿಕ ಎದುರಾಗಬಹುದಾದ ಯಾವುದೇ ಸಂದರ್ಭವನ್ನು ಎದುರಿಸಲು ಕೈಗೊಳ್ಳುವ ಮುಂಜಾಗ್ರತಾ ಕ್ರಮಗಳ ಕುರಿತು ನ್ಯಾ. ಗೊಗೋಯ್ ಅವರು ಉಭಯ ಅಧಿಕಾರಿಗಳಿಂದ ವಿಸ್ತೃತವಾಗಿ ಮಾಹಿತಿ ಪಡೆದುಕೊಂಡರು.

click me!