ಮಂದಿರ ಮಧ್ಯಸ್ಥಿಕೆ ತಂಡ ಇಂದು ಅಯೋಧ್ಯೆಗೆ

Published : Mar 12, 2019, 09:51 AM IST
ಮಂದಿರ ಮಧ್ಯಸ್ಥಿಕೆ ತಂಡ ಇಂದು ಅಯೋಧ್ಯೆಗೆ

ಸಾರಾಂಶ

ಮಂದಿರ ಮಧ್ಯಸ್ಥಿಕೆ ತಂಡ ಇಂದು ಅಯೋಧ್ಯೆಗೆ |  ವಿಶೇಷ ವಿಮಾನದಲ್ಲಿ ಬೆಳಗ್ಗೆ 11ಕ್ಕೆ ಆಗಮನ |  ಸಂಧಾನ ಪ್ರಕ್ರಿಯೆಗೆ ಚಾಲನೆ |  ಅವಧ್‌ ವಿವಿಯಲ್ಲಿ ಸಂಧಾನ ಕಾರ್ಯ, ವಾಸ್ತವ್ಯ

ಲಖನೌ (ಮಾ. 12): ಅಯೋಧ್ಯೆ ರಾಮಮಂದಿರ-ಬಾಬ್ರಿ ಮಸೀದಿ ವಿವಾದ ಬಗೆಹರಿಸಲು ಸುಪ್ರೀಂ ಕೋರ್ಟ್‌ನಿಂದ ನೇಮಕವಾಗಿರುವ ತ್ರಿಸದಸ್ಯ ಸಂಧಾನಕಾರರ ತಂಡ ಮಂಗಳವಾರದಿಂದ ಅಧಿಕೃತ ಕೆಲಸ ಆರಂಭಿಸಲಿದೆ.

ಸಂಧಾನಕಾರರ ತಂಡದಲ್ಲಿರುವ ನ್ಯಾ. ಇಬ್ರಾಹಿಂ ಕಲೀಫುಲ್ಲಾ, ಅಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ ಗುರೂಜಿ, ಹಿರಿಯ ವಕೀಲ ಶ್ರೀರಾಂ ಪಂಚು ಅವರು ವಿಶೇಷ ವಿಮಾನದಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಅಯೋಧ್ಯೆ ತಲುಪಲಿದ್ದಾರೆ.

ಇವರಿಗೆ ಅಯೋಧ್ಯೆಯ ಅವಧ್‌ ವಿವಿಯಲ್ಲಿ ‘ಮಿನಿ ಕಚೇರಿ’ ತೆರೆಯಲಾಗಿದೆ. ಈ ಕಚೇರಿಯಲ್ಲೇ ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ, ಸಂಧಾನ ಕೊಠಡಿ ಹಾಗೂ ಇತರ ವ್ಯವಸ್ಥೆಗಳನ್ನು ಮಾಡಿ ಕೊಡಲಾಗಿದೆ.

ಸುಪ್ರೀಂ ಕೋರ್ಟ್‌ ಆದೇಶಾನುಸಾರ 8 ವಾರದಲ್ಲಿ ಇವರು ಸಂಧಾನ ಪ್ರಕ್ರಿಯೆ ಮುಗಿಸಬೇಕಿದೆ. ಅಲ್ಲದೆ, ಸಂಧಾನ ಪ್ರಕ್ರಿಯೆ ರಹಸ್ಯವಾಗಿರಲಿದ್ದು, ಇದರ ವರದಿಗಾರಿಕೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ತಂಡದ ಸಂಚಾರದ ಬಗ್ಗೆ ಯಾವುದೇ ಮಾಹಿತಿಯನ್ನು ಸರ್ಕಾರ ನೀಡುವುದಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು