
ಮೈಸೂರು(ಸೆ.30): ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಮುಗಿಯುತ್ತಿದ್ದಂತೆ ಅರಮನೆ, ಮತ್ತೊಂದು ಸಂಭ್ರಮಕ್ಕೆ ಸಾಕ್ಷಿಯಾಗಲಿದೆ. ನಾಳೆ ತ್ರಿಷಿಕಾ ದೇವಿ ಒಡೆಯರ್ ಸೀಮಂತ ಶಾಸ್ತ್ರ ನಡೆಯಲಿದೆ.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಷಿಕಾ ಒಡೆಯರ್ ಸದ್ಯ ಗರ್ಭಿಣಿ. ಹೀಗಾಗಿ ಬೆಂಗಳೂರಿನ ಅರಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ದಸರಾ ಅಂಗವಾಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಇತ್ತೀಚೆಗಷ್ಟೆ ಮೈಸೂರಿಗೆ ಆಗಮಿಸಿದ್ದರು. ಇಂದು ವಿಜೃಂಭಣೆಯ ದಸರಾ ಮಹೋತ್ಸವಕ್ಕೆ ತೆರೆಬೀಳಲಿದ್ದು, ನಾಳೆ ಅರಮನೆಯಲ್ಲಿ ತ್ರಿಷಿಕಾ ದೇವಿ ಒಡೆಯರ್ ಸಿಮಂತ ಕಾರ್ಯ ನಡೆಯಲಿದೆ.
ರಾಜವಂಶಸ್ಥರು ಹಾಗೂ ಸಂಬಂಧಿಕರಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ. ಪ್ರಮೋದಾ ದೇವಿ ಒಡೆಯರ್ ಸೇರಿದಂತೆ ತ್ರಿಷಿಕಾ ದೇವಿಯವರ ಕುಟುಂಬ ಸದಸ್ಯರು, ಗಣ್ಯರು ಸೀಮಂತ ಶಾಸ್ತ್ರದಲ್ಲಿ ಭಾಗಿಯಾಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.