ಬಂಡೀಪುರ: ರಾಹುಲ್ ಬೆಂಬಲ ಬಳಿಕ ಕೇರಳ ಪ್ರತಿಭಟನೆ ತೀವ್ರ| ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನಾ ಮೆರವಣಿಗೆ
ವಯನಾಡು[ಆ.01]: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬೆಂಬಲ ನೀಡಿದ ಬೆನ್ನಲ್ಲೇ, ವಯನಾಡು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರು ಸೋಮವಾರ ತಮ್ಮ ಪ್ರತಿಭಟನೆಯನ್ನು ಇನ್ನಷ್ಟುತೀವ್ರಗೊಳಿಸಿದ್ದಾರೆ.
ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಹೇರಿರುವ ನಿಷೇಧ ತೆರವುಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನಾಕಾರರು ಬಂಡೀಪುರದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಸಾವಿರಾರು ರೈತರು ಹಾಗೂ ಸ್ಥಳೀಯರು ಸಂಚಾರ ನಿಷೇಧದ ವಿರುದ್ಧ ಘೋಷಣೆ ಕೂಗಿದ್ದಾರೆ.
undefined
ಇದೇ ವೇಳೆ ಡೆಮೊಕ್ರಾಟಿಕ್ ಯುತ್ ಫೆಡರೇಶನ್ ಆಫ್ ಇಂಡಿಯಾ, ಯುವ ಕಾಂಗ್ರೆಸ್ ಹಾಗೂ ಯುವಕರು ನಡೆಸುತ್ತಿರುವ ಉಪವಾಸ 6ನೇ ದಿನಕ್ಕೆ ಕಾಲಿಟ್ಟಿದೆ. ಉಪವಾಸದಲ್ಲಿ ಭಾಗವಹಿಸಿರುವ ನಾಲ್ಕು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಗಳವಾರ ದೆಹಲಿಗೆ ತೆರಳಲಿದ್ದು, ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಅವರ ಬಳಿ ಈ ವಿಷಯವಾಗಿ ಚರ್ಚೆ ನಡೆಸುವ ಸಾಧ್ಯತೆ ಇದೆ.
ಅ.3ರಂದು ರಾಹುಲ್ ಗಾಂಧಿ ಭೇಟಿ:
ವಯನಾಡು ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ರಾಹುಲ್ ಗಾಂಧಿ ಅ.3ರಂದು ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುವ ನಿರೀಕ್ಷೆ ಇದ್ದು, ಪ್ರತಿಭಟನೆ ಬೆಂಬಲ ಸೂಚಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.