
ಬೆಂಗಳೂರು(ಏ.09): ಹಣ ಡ್ರಾ ಮಾಡಲು ಎಟಿಎಂ ಕೇಂದ್ರಕ್ಕೆ ತೆರಳಿದ್ದ ಯುವಕನನ್ನು ಅಪಹರಿಸಲಾಗಿದೆ ಎಂದು ಪೀಣ್ಯ ಪೊಲೀಸ್ ಠಾಣೆಯಲ್ಲಿ ಯುವಕನ ಸಂಬಂಧಿಕರು ದೂರು ದಾಖಲಿಸಿದ್ದಾರೆ. ಪೀಣ್ಯ ಕಾರ್ಖಾನೆಯೊಂದರಲ್ಲಿ ಉದ್ಯೋಗಿಯಾಗಿರುವ ಮಾರುತಿ (21) ನಾಪತ್ತೆಯಾಗಿರುವ ಯುವಕ.
ಬಳ್ಳಾರಿ ಮೂಲದ ಮಾರುತಿ ಕೆಲ ವರ್ಷಗಳಿಂದ ಪೀಣ್ಯ ಕೈಗಾರಿಕಾ ಪ್ರದೇಶದ ಕಾರ್ಖಾನೆ ಒಂದರಲ್ಲಿ ಕೆಲಸಕ್ಕಿದ್ದು, ಸಂಬಂಧಿಕರ ಮನೆಯಲ್ಲಿ ವಾಸವಿದ್ದ. ಶುಕ್ರವಾರ ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಪೀಣ್ಯ ಪೊಲೀಸ್ ಠಾಣೆಗೆ ಕೂಗಳತೆ ದೂರದಲ್ಲಿರುವ ಆ್ಯಕ್ಸಿಸ್ ಬ್ಯಾಂಕ್ ಎಟಿಎಂಗೆ ಹೋಗಿದ್ದ ಮಾರುತಿ, ಅಲ್ಲಿಂದ ಹೊರಬರುತ್ತಿದ್ದಂತೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರುತಿಯನ್ನು ಅಪಹರಿಸಿದ್ದಾರೆ.
ವಿಚಿತ್ರ ಎಂದರೆ, ಅಪಹರಣಕ್ಕೊಳಗಾಗಿರುವ ಯುವಕ ತನ್ನ ಚಿಕ್ಕಪ್ಪನಿಗೆ ಕರೆ ಮಾಡಿ, ಅಪರಿಚಿತರು ನನ್ನ ಅಪಹರಿಸಿದ್ದಾರೆ ಎಂದು ಹೇಳಿದ್ದಾನೆ ಎನ್ನಲಾಗಿದೆ. ಯುವಕನ ಮೊಬೈಲ್‌ಗೆ ಕರೆ ಮಾಡಿದ್ದು, ಆತನ ಮೊಬೈಲ್ ಸ್ವಿಚ್ ಆಫ್ ಎಂದು ಬರುತ್ತಿದೆ. ಮೊಬೈಲ್ ಸಂಪರ್ಕ ಹಿಡಿದು ಪೊಲೀಸರು ಯುವಕನ ಪತ್ತೆಗೆ ಮುಂದಾಗಿದ್ದಾರೆ. ಸಂಬಂಧಿಕರು ನೀಡಿದ ದೂರಿನ ಮೇರೆಗೆ ಅಪಹರಣ ಪ್ರಕರಣ ದಾಖಲಿಸಿಕೊಳ್ಳ ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಅಪಹರಣಗೊಂಡಿರುವ ಮಾರುತಿ ಯುವತಿ ಯೊಬ್ಬಳನ್ನು ಪ್ರೀತಿಸುತ್ತಿದ್ದು, ಆಕೆಯೊಂದಿಗೆ ಓಡಿ ಹೋಗಿ ಈ ರೀತಿ ನಾಟಕವಾಡುತ್ತಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.