
ದೆಹಲಿ(ಅ.9): ರಾಯಚೂರಿನಲ್ಲಿ ನಡೆಯಲಿರುವ 82ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಕಸಾಪ ಕಾರ್ಯಕಾರಿಣಿಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಡಿಸೆಂಬರ್ 2, 3, 4 ರಂದು ರಾಯಚೂರಿನಲ್ಲಿ ಸಮ್ಮೇಳನ ನಡೆಯಲಿದೆ. ಸಮ್ಮೇಳನಕ್ಕೆ ಸರ್ಕಾರ ನಾಲ್ಕು ಕೋಟಿ ರೂ. ನೀಡಲಿದೆ.
ಪ್ರೊ.ಬರಗೂರು ರಾಮಚಂದ್ರಪ್ಪ ಸಾಹಿತ್ಯ ಮತ್ತು ಚಲನಚಿತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದವರು. 1947 ರ ಅಕ್ಟೋಬರ್ 18 ರಂದು ತುಮಕೂರಿನ ಶಿರಾ ತಾಲ್ಲೂಕಿನ ಬರಗೂರು ಗ್ರಾಮದಲ್ಲಿ ಜನನ. ತಂದೆ ರಂಗದಾಸಪ್ಪ, ತಾಯಿ ಕೆಂಚಮ್ಮ. ಬರಗೂರು ಅವರು ಕವಿ, ಕಾದಂಬರಿಕಾರ, ವಿಮರ್ಶಕ, ಚನಲಚಿತ್ರ ನಿರ್ದೇಶಕ ಹೀಗೆ ಹಲವು ಪ್ರಕಾರಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.