
ಬೆಂಗಳೂರು : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಗರ ನಕ್ಸಲೈಟ್ ಇರಬೇಕು ಎಂದು ಬಿಜೆಪಿ ಶಾಸಕ ಹಾಗೂ ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ ಆಪಾದಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಂಗೆಗೆ ಪ್ರಚೋದನೆ ಮಾಡುತ್ತಾರೆ ಎಂದರೆ ಕುಮಾರಸ್ವಾಮಿ ಅವರು ನಗರ ನಕ್ಸಲೈಟ್ ಇರಬೇಕು. ಅವರು ಹೀಗೆಯೇ ಬಹಳಷ್ಟು ಬಾಯಿ ಹರಿಬಿಟ್ಟರೆ ನಮಗೂ ಗೊತ್ತಿದೆ. ನಾವೂ ಇಂಥದ್ದಕ್ಕೆಲ್ಲ ಉತ್ತರ ನೀಡುವುದನ್ನು ಕರಗತ ಮಾಡಿಕೊಂಡಿದ್ದೇವೆ ಎಂದು ಹೇಳಿದರು.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಆ ಸ್ಥಾನದ ಗೌರವದಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಅವರಿಗೆ ನೋವಾಗಿದ್ದರೆ, ಹೆಚ್ಚು ಟೆನ್ಷನ್ ಆಗಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ. ಅದನ್ನು ಬಿಟ್ಟು ಸ್ಥಾನದ ಘನತೆ ಮರೆತು ಹೇಳಿಕೆ ನೀಡಬಾರದು ಎಂದು ಹರಿಹಾಯ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.