ಬಸವನಗುಡಿ, ಬೆಂಗಳೂರು ದಕ್ಷಿಣದಲ್ಲಿ ಯಾವ ಪಕ್ಷಕ್ಕಿದೆ ಅಲೆ, ಇಲ್ಲಿದೆ ಡಿಟೇಲ್ಸ್

By Suvarna Web DeskFirst Published Mar 4, 2018, 12:00 PM IST
Highlights

ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಆಕಾಂಕ್ಷಿ.

ಹಾಲಿ ಶಾಸಕ ಎಂ.ಕೃಷ್ಣಪ್ಪ ಅವರೇ ಈ ಬಾರಿಯೂ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಕಳೆದ ಬಾರಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಮಾಜಿ ಸಂಸದೆ ತೇಜಸ್ವಿನಿ ಗೌಡ ಅವರು ಈಗ ಬಿಜೆಪಿ ಪಾಳೆಯವನ್ನೇ ಸೇರಿದ್ದರೂ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿಲ್ಲ. ಇನ್ನು ಜೆಡಿಎಸ್‌ನಿಂದ ಗೊಟ್ಟಿಗೆರೆ ಮಂಜುನಾಥ್ ಅವರು ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಾಗಿದೆ. ಕಾಂಗ್ರೆಸ್‌ನಿಂದ ಈ ಕ್ಷೇತ್ರದ ಟಿಕೆಟ್ ಗಾಗಿ ದೊಡ್ಡ ಪೈಪೋಟಿಯೇ ಇದೆ. ಬೆಂಗಳೂರು ಡೈರಿ ಮಾಜಿ ಅಧ್ಯಕ್ಷ ಆರ್.ಕೆ. ರಮೇಶ್, ಸಚಿವ ಡಿ.ಕೆ. ಶಿವಕುಮಾರ್ ಅವರ ಸಂಬಂಧಿ ವಿನೋದ್, ಸ್ಥಳೀಯ ಪ್ರಭಾವಿ ಪ್ರಭಾಕರ ರೆಡ್ಡಿ ಹಾಗೂ ಸುಷ್ಮಾ ರಾಜಗೋಪಾಲ ರೆಡ್ಡಿ ಆಕಾಂಕ್ಷಿಗಳಾಗಿದ್ದಾರೆ. ರಮೇಶ್ ಅವರ ಹೆಸರು ಪ್ರಧಾನವಾಗಿ ಕೇಳಿ ಬರುತ್ತಿದೆ. ಕಾಂಗ್ರೆಸ್ ಟಿಕೆಟ್‌ಗೆ ಪೈಪೋಟಿ

ಬಸವನಗುಡಿ

ಬಿಜೆಪಿಯ ಹಾಲಿ ಶಾಸಕ ರವಿ ಸುಬ್ರಮಣ್ಯ ಸ್ಪರ್ಧೆ ಖಚಿತ. ಮಾಜಿ ಮೇಯರ್ ಕಟ್ಟೆ ಸತ್ಯನಾರಾಯಣ ಅವರೂ ಟಿಕೆಟ್ ಕೇಳುತ್ತಿದ್ದಾರೆ. ಆದರೆ, ಸಿಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಜೆಡಿಎಸ್‌ನಿಂದ ಕಳೆದ ಬಾರಿಯ ಪರಾಜಿತ ಹುರಿಯಾಳು ಬಾಗೇಗೌಡ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ಈ ಕೇತ್ರದಿಂದ ಕಾಂಗ್ರೆಸ್ ಟಿಕೆಟ್‌ಗಾಗಿ ಭಾರಿ ಪೈಪೋಟಿ ನಡೆದಿದೆ. ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಪ್ರೊ. ಬಿ.ಕೆ. ಚಂದ್ರಶೇಖರ್ ಆಕಾಂಕ್ಷಿ. ಯು.ಬಿ. ವೆಂಕಟೇಶ್ ಹೆಸರೂ ಕೇಳಿಬರುತ್ತಿದೆ. ಆದರೆ, ವೆಂಕಟೇಶ್ ಜಯನಗರ ಟಿಕೆಟ್‌ಗೂ ಪ್ರಯತ್ನ ನಡೆಸಿದ್ದಾರೆ. ಆ ಕ್ಷೇತ್ರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಆಕಾಂಕ್ಷಿ. ಖರ್ಗೆ ಅವರ ಬೆಂಬಲ ವೆಂಕಟೇಶ್‌ಗಿದೆ. ಜಯನಗರ ಕೈ ತಪ್ಪಿದರೆ ಪರ್ಯಾಯವಾಗಿ ಬಸವನಗುಡಿ ಪರಿ ಗಣಿಸುವಂತೆ ಕಾಂಗ್ರೆಸ್ ನಾಯಕತ್ವ ಸೂಚಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

click me!