
ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದರ ಬಗ್ಗೆ ಬೇಸರವಾಗಿದೆ ಆದರೆ ಕೈಕಟ್ಟಿ ಕುಳಿತುಕೊಳ್ಳುವ ಸಭಾಪತಿ ಸ್ಥಾನ ನನಗೆ ಬೇಕಿಲ್ಲ ಎಂದು ಮಾಜಿ ಸಚಿವ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ.
ದೇವೇಗೌಡರು ನನಗೆ ಸಭಾಪತಿ ಹುದ್ದೆನೀಡುವ ಬಗ್ಗೆ ಕಾರ್ಯಕರ್ತರ ಎದುರು ಹೇಳಿಕೊಂಡಿದ್ದಾರೆಯೇ ವಿನಃ ನನ್ನ ಮುಂದೆ ಹೇಳಿಲ್ಲ ಇದನ್ನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ರಾಜ್ಯದಲ್ಲಿ ಶಿಕ್ಷಕರ ಸಮಸ್ಯೆ ಬಹಳಷ್ಟಿವೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಸಚಿವನಾಗುವ ಬಯಕೆ ಹೊಂದಿದ್ದೆ ಎಂದು ಹೇಳಿದರು.
ಹಲವು ವರ್ಷಗಳಿಂದ ಶಿಕ್ಷಕರು ನನ್ನನ್ನು ಆಯ್ಕೆಮಾಡುತ್ತಿದ್ದು, 38 ವರ್ಷಗಳಿಂದ ಜೆಡಿಎಸ್‍ನಲ್ಲಿದ್ದೇನೆ. ಈ ಹಿಂದೆ ಸಚಿವನಾಗಿಯೂ ಕೆಲಸಮಾಡಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆಯಿಲ್ಲ ಆದರೂ ಸಚಿವ ಸ್ಥಾನ ತಪ್ಪಿದೆ ಎಂದರು.
ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರಕಾರ ರಚನೆಯಾದ ನಂತರ ಶಾಸಕರ ಬಂಡಾಯ ಮುಂದುವರಿಯುತ್ತಲೇ ಇದೆ. ಎರಡೂ ಪಕ್ಷದಲ್ಲಿಯೂ ಸಚಿವ ಸ್ಥಾನ ವಂಚಿತರು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.