ರಾಣಿ ಚೆನ್ನಮ್ಮ ರೈಲಲ್ಲಿ ಹೊರಟ್ಟಿಗೆ ಜೀವ ಬೆದರಿಕೆ

Published : Jun 25, 2019, 09:03 AM ISTUpdated : Jun 25, 2019, 09:04 AM IST
ರಾಣಿ ಚೆನ್ನಮ್ಮ ರೈಲಲ್ಲಿ  ಹೊರಟ್ಟಿಗೆ ಜೀವ ಬೆದರಿಕೆ

ಸಾರಾಂಶ

ರಾಣಿ ಚೆನ್ನಮ್ಮ ರೈಲಿನಲ್ಲಿ ಹೊರಟ್ಟಿಗೆ ಜೀವ ಬೆದರಿಕೆ |  ಸೈನಿಕನೆಂದು ಹೇಳಲಾಗಿರುವ ವ್ಯಕ್ತಿಯಿಂದ ನಿಂದನೆ: ದೂರು | ಆರೋಪಿ ಬಂಧನಕ್ಕೆ ಜಾಲ ಬೀಸಿದ ಪೊಲೀಸರು  

ಹುಬ್ಬಳ್ಳಿ (ಜೂ. 25):  ಹಿರಿಯ ಜೆಡಿಎಸ್‌ ಮುಖಂಡ, ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಸೇರಿದಂತೆ ಮೂವರಿಗೆ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ ಘಟನೆ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಜೂ.14 ರಂದು ನಡೆದಿದೆ.

ಈ ಬಗ್ಗೆ ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಅವರು ದೂರು ನೀಡಿದ್ದು ಪೊಲೀಸರು ಆರೋಪಿ ಬಂಧನಕ್ಕೆ ಜಾಲಬೀಸಿದ್ದಾರೆ. ಬೆಳಗಾವಿಯ ಮರಾಠಾ ರೆಜಿಮೆಂಟ್‌ನ ಸೈನಿಕ ಎಂದು ಹೇಳಲಾದ ರೋಹಿತ ಪಟ್ಟೇದ ಎಂಬಾತನೇ ಜೀವ ಬೆದರಿಕೆ ಹಾಕಿದ ವ್ಯಕ್ತಿ ಎಂದು ಹೇಳಲಾಗಿದೆ.

ಆಗಿದ್ದೇನು?: ಹೊರಟ್ಟಿಬೆಂಗಳೂರಿನಿಂದ ಹುಬ್ಬಳ್ಳಿಗೆ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಮೊಬೈಲ್‌ನಲ್ಲಿ ಕಾರ್ಯಕ್ರಮವೊಂದರ ವಿಡಿಯೋ ನೋಡುತ್ತಿದ್ದ ಹೊರಟ್ಟಿಅವರನ್ನು ಮೇಲಿನ ಸೀಟಿನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬ ವ್ಯಾಲ್ಯೂಮ್‌ ಕಡಿಮೆ ಮಾಡುವಂತೆ ಹೇಳಿದ್ದಾನೆ. ಮೊಬೈಲ್‌ ಬಂದ್‌ ಮಾಡಿದ್ದಾರೆ.

ಸ್ವಲ್ಪ ಸಮಯದ ಬಳಿಕ ಪುನಃ ಆತ ಲೈಟ್‌ ಆಫ್‌ ಮಾಡುವಂತೆ ಹೇಳಿ ವಿನಾಕಾರಣ ಜಗಳ ತೆಗೆದಿದ್ದಾನೆ. ಮಾತ್ರವಲ್ಲ ಜಾಸ್ತಿ ಮಾತಾಡಿದರೆ ಶೂಟ್‌ ಮಾಡ್ಬಿಡ್ತೀನಿ ಎಂದು ರೈಲಿನಲ್ಲೇ ಹೊರಟ್ಟಿಸೇರಿದಂತೆ ಮೂವರಿಗೆ ಜೀವ ಬೆದರಿಕೆ ಹಾಕಿ ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಬಳಿಕ ಟಿಟಿಇ ಅವರೇ ಹೊರಟ್ಟಿಅವರಿಗೆ ಬೇರೆ ಕಂಪಾರ್ಟ್‌ಮೆಂಟ್‌ನಲ್ಲಿ ಸೀಟ್‌ ವ್ಯವಸ್ಥೆ ಮಾಡಿಕೊಂಡರು. ಈ ಸಂಬಂಧ ರೈಲ್ವೆ ಪೊಲೀಸ್‌ ಠಾಣೆಗೆ ಹೊರಟ್ಟಿ, 18ರಂದು ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಘಟನೆ ಬೆಂಗಳೂರಲ್ಲಿ ಆದ ಕಾರಣದಿಂದ ಪ್ರಕರಣವನ್ನು ಹುಬ್ಬಳ್ಳಿ ರೈಲ್ವೆ ಠಾಣೆ ಪೊಲೀಸರು ಬೆಂಗಳೂರು ಸಿಟಿ ರೈಲ್ವೆ ಠಾಣೆಗೆ ವರ್ಗಾಯಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದ್ಯಪ್ರಿಯರಿಗೆ ಶಾಕ್.. ಮಧ್ಯಾಹ್ನ 2 ರಿಂದ 5 ರವರೆಗೆ ಮದ್ಯ ಮಾರಾಟ ಬಂದ್: ಏನಿದು ಥಾಯ್‌ ವಿಚಿತ್ರ ನಿಯಮ!
ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ