
ಬೆಂಗಳೂರು (ಜು. 10): ಬಿಬಿಎಂಪಿಯಿಂದ ಆಚರಿಸುವ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಈ ಬಾರಿಯೂ ವಿಳಂಬವಾಗುವ ಲಕ್ಷಣ ಕಾಣುತ್ತಿವೆ.
ಕಳೆದ ವರ್ಷ ಕೆಂಪೇಗೌಡ ಜಯಂತಿ ಆಚರಣೆ ಸಮಾರಂಭದ ಸಂದರ್ಭದಲ್ಲಿ ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಸೇರಿದಂತೆ ಮತ್ತಿತರ ಗಣ್ಯರ ನಿಧನದಿಂದ ತಡವಾಗಿ ಆಚರಣೆ ಮಾಡಲಾಗಿತ್ತು. ಈ ವರ್ಷ ಮುಖ್ಯಮಂತ್ರಿ ಕುಮಾರಸ್ವಾಮಿ ವಿದೇಶ ಪ್ರವಾಸದಿಂದ ಬಂದ ಮೇಲೆ ಈ ಬಗ್ಗೆ ಚರ್ಚಿಸಿ ದಿನಾಂಕ ನಿಗದಿ ಪಡಿಸಲು ಮೇಯರ್ ಹಾಗೂ ಸದಸ್ಯರು ತೀರ್ಮಾನಿಸಿದ್ದರು.
ಈ ಮಧ್ಯೆ ಮೈತ್ರಿ ಪಕ್ಷಗಳ ಅತೃಪ್ತ ಶಾಸಕರು ರಾಜೀನಾಮೆ ನೀಡಿರುವುದು ಕೆಂಪೇಗೌಡ ಜಯಂತಿ ಆಚರಣೆ ಬಗ್ಗೆ ಪ್ರಸ್ತಾಪ ಅಸಾಧ್ಯವಾಗಿದೆ. ಹೀಗಾಗಿ, ಸಮಾರಂಭ ವಿಳಂಬವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಕೆಂಪೇಗೌಡ ಪ್ರಶಸ್ತಿಗೆ ಈಗಾಗಲೇ 700ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಈ ಅರ್ಜಿಗಳನ್ನು ಅಂತಿಮಗೊಳಿಸಲು ಸಮಿತಿ ರಚನೆಯಾಗಬೇಕಿದೆ. ಆದರೆ, ರಾಜ್ಯ ರಾಜಕೀಯ ಬೆಳವಣಿಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಕೆಂಪೇಗೌಡ ಜಯಂತಿ ಆಚರಣಾ ಸಮಿತಿ ಸದಸ್ಯರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.