
ಬೆಂಗಳೂರು(ಸೆ.28): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೂತನ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಇಂದು ಚುನಾವಣೆ ಈ ಬಾರಿಯೂ ಜೆಡಿಎಸ್ ಜೊತೆ ಹೆಜ್ಜೆ ಹಾಕಲು ಕಾಂಗ್ರೆಸ್ ಸಿದ್ಧವಾಗಿದೆ. ಕಾಂಗ್ರೆಸ್ ಗೆ ಮೇಯರ್ ಸ್ಥಾನ ಹಾಗೂ ಜೆಡಿಎಸ್ಗೆ ಉಪಮೇಯರ್ ಸ್ಥಾನ ಫಿಕ್ಸ್ ಆಗಿದೆ.
ತೀವ್ರ ಪೈಪೋಟಿ ನಡುವೆ ಇಂಧನ ಸಚಿವ ಡಿಕೆ ಶಿವಕುಮಾರ್ ಪರಮಾಪ್ತ ಡಿಜೆಹಳ್ಳಿ ಕಾರ್ಪೊರೇಟರ್ ಸಂಪತ್ ರಾಜ್ ಹೆಸರನ್ನು ಮೇಯರ್ ಸ್ಥಾನಕ್ಕೆ ಫೈನಲ್ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ ಇದುವರೆಗೂ ಸುಮ್ಮನಿದ್ದ್ದ ಬಿಜೆಪಿ ಕೊನೇ ಕ್ಷಣದಲ್ಲಿ ಜೆಡಿಎಸ್-ಕಾಂಗ್ರೆಸ್ಗೆ ಶಾಕ್ ನೀಡಿದೆ. ಮುನಿಸ್ವಾಮಿ ಅವರನ್ನು ಮೇಯರ್ ಅಭ್ಯರ್ಥಿಯಾಗಿ, ಮಮತ ವಾಸುದೇವ್ ಅವರನ್ನು ಉಪಮೇಯರ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ.
ಒಟ್ಟು ಮತಗಳು- 266
ಮ್ಯಾಜಿಕ್ ನಂಬರ್- 134
ಇನ್ನೂ ಪಾಲಿಕೆಯ 198 ಸದಸ್ಯರು ಸೇರಿದಂತೆ ಒಟ್ಟು 266 ಮಂದಿ ಮತದಾನ ಮಾಡಲಿದ್ದಾರೆ. ಮ್ಯಾಜಿಕ್ ನಂಬರ್ 134, ಪಕ್ಷಗಳ ಬಲಾಬಲ ನೋಡುವುದಾದರೆ ಕಾಂಗ್ರೆಸ್ 109, ಜೆಡಿಎಸ್ 24, ಬಿಜೆಪಿ 126 ಸದಸ್ಯರನ್ನ ಹೊಂದಿದರೆ. 7 ಮಂದಿ ಪಕ್ಷೇತರರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ.
ಬೆಳಗ್ಗೆ 8ರಿಂದ ಚುನಾವಣಾ ಪ್ರಕ್ರಿಯೆಗಳು ನಡೆಯಲಿದ್ದು.. 11.30ಕ್ಕೆ ಮತದಾನ ಕೈ ಎತ್ತುವ ಮೂಲಕ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಒಟ್ಟಿನಲ್ಲಿ , ಯಾರಾಗ್ತಾರೆ ಮೇಯರ್, ಉಪಮೇಯರ್ ಎನ್ನುವ ಕುತೂಹಲಕ್ಕೆ ಇಂದು ತೆರೆ ಬೀಳಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.