
ಬೆಂಗಳೂರು(ಸೆ.25): ಕಾಂಗ್ರೆಸ್, ಜೆಡಿಎಸ್ ಮೈತ್ರಿ ಮುಂದುವರಿಕೆಯಾದ ಕಾರಣ ಬಿಬಿಎಂಪಿ ಮೇಯರ್, ಉಪಮೇಯರ್ ಆಯ್ಕೆ ಫಿಕ್ಸ್ ಆಗಿದೆ. ಶಾಂತಿನಗರ ಕಾರ್ಪೊರೇಟರ್ ಕಾಂಗ್ರೆಸ್ನ ಸೌಮ್ಯ ಶಿವಕುಮಾರ್ ಮೇಯರ್ ಆಗುವ ಸಾಧ್ಯತೆ ಹೆಚ್ಚಾಗಿದೆ. ಮೇಯರ್ ಚುನಾವಣೆ ಸೆ.25 ರಂದು ನಡೆಯಲಿದೆ. ಎರಡು ಪಕ್ಷಗಳ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ , ಎಚ್ಡಿಕೆ ರಹಸ್ಯ ಸ್ಥಳದಲ್ಲಿ ಮಾತುಕತೆ ನಡೆಸಿ ಒಮ್ಮತದ ತೀರ್ಮಾನಕ್ಕೆ ಬಂದಿದ್ದಾರೆ.
ಎರಡು ಸ್ಥಾಯಿ ಸಮಿತಿ ಹೆಚ್ಚಿಗೆ ನೀಡುವಂತೆ ಜೆಡಿಎಸ್ ಮನವಿ ಮಾಡಿದ್ದು, ಸಿಎಂ ಜೊತೆ ಚರ್ಚಿಸಿ ಕಾಂಗ್ರೆಸ್ ನಾಯಕರು ಅಂತಿಮ ತೀರ್ಮಾನ ಮಾಡಿದ್ದಾರೆ. ಮಾತುಕತೆ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ರಾಮಲಿಂಗಾರೆಡ್ಡಿ, ಕುಪೇಂದ್ರ ರೆಡ್ಡಿ ಉಪಸ್ಥಿತರಿದ್ದರು. ಉಪಮೇಯರ್ ಅಭ್ಯರ್ಥಿ ಆಯ್ಕೆ ವಿಚಾರ ನಾಳೆ ಸಂಜೆಯೊಳಗೆ ಅಂತಿಮಗೊಳಿಸಲು ನಿರ್ಧರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.