ಅತೃಪ್ತ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ಮುಂದಿನ ನಡೆ ಏನು..?

By Web DeskFirst Published Dec 26, 2018, 12:04 PM IST
Highlights

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಯಾದ ಬೆನ್ನಲ್ಲೇ ಅನೇಕ ಮುಖಂಡರಿಂದ ಅತೃಪ್ತಿ ಭುಗಿಲೆದ್ದಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಮುಖಂಡ ಬಿಸಿ ಪಾಟೀಲ್ ಮುಂದಿನ ತೀರ್ಮಾನದ ಬಗ್ಗೆ ಮಾತನಾಡಿದ್ದಾರೆ. 

ಮೈಸೂರು: ತಮಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ. ಅತೃಪ್ತ ಶಾಸಕರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುವುದಾಗಿ ಹಿರೇಕೆರೂರು ಕಾಂಗ್ರೆಸ್‌ ಶಾಸಕ ಬಿ.ಸಿ. ಪಾಟೀಲ್‌ ತಿಳಿಸಿದ್ದಾರೆ.

ಇಲ್ಲಿನ ಸುತ್ತೂರು ಮಠಕ್ಕೆ ಭಾನುವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ಪುನಾರಚನೆ ವೇಳೆ ಸಾಮಾಜಿಕ ನ್ಯಾಯಕ್ಕೆ ಧಕ್ಕೆಯಾಗಿದೆ. 

ಲಿಂಗಾಯತ ಸಮಾಜವನ್ನು ಕಡೆಗಣಿಸಲಾಗಿದೆ. ಅದರಲ್ಲೂ ಸಾದರ ಲಿಂಗಾಯತರಿಗೆ ಅನ್ಯಾಯ ಮಾಡಲಾಗಿದೆ ಎಂದು ಕಿಡಿಕಾರಿದರು. 

16 ಶಾಸಕರಿರುವ ಲಿಂಗಾಯತ ಸಮಾಜಕ್ಕೂ 3 ಸಚಿವ ಸ್ಥಾನ, ಆರು ಶಾಸಕರಿರುವ ಮುಸ್ಲಿಂ ಸಮುದಾಯಕ್ಕೆ ಮೂರು ಸಚಿವ ಸ್ಥಾನ ನೀಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯರನ್ನು ನಂಬಿದ್ದ ನನಗೆ ಮೋಸವಾಗಿದೆ ಎಂದರು.

click me!