
ಬೆಂಗಳೂರು(ಜೂನ್ 22): ಬಿಡಿಎ ಸ್ವಾಧೀನ ಪಡಿಸಿಕೊಂಡ ಸಾವಿರಾರು ಎಕರೆ ಪ್ರದೇಶವನ್ನು ಬಳಕೆ ಮಾಡದ ಹಿನ್ನೆಲೆಯಲ್ಲಿ, ಆ ಭೂಮಿಯಲ್ಲಿ ನಿವೇಶನಗಳನ್ನ ಹಂಚಿಕೆ ಮಾಡುವಂತೆ ಬಿಡಿಎ ಅಧ್ಯಕ್ಷ ಕೆ. ವೆಂಕಟೇಶ್ ಆದೇಶಿಸಿದ್ದಾರೆ. ಬಡಾವಣೆ ನಿರ್ಮಾಣ ಉದ್ದೇಶಕ್ಕೆ ಸ್ವಾಧೀನ ಪಡಿಸಿಕೊಂಡಿದ್ದ ಭೂಮಿಗೆ ಖಾಸಗಿಯವರು ಬೇಲಿ ಹಾಕಿದ್ದಾರೆ. ಹೀಗಾಗಿ ಸರ್ವೇ ನಡೆಸಿ ಸೂಕ್ತ ಭದ್ರತೆ ತೆಗೆದುಕೊಳ್ಳುವಂತೆ ಹಾಗೂ ಇನ್ನು 15 ದಿನದೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜಾಜಿ ನಗರದ ವೆಸ್ಟ್ ಅಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಬಡಾವಣೆ, ನಾಗರಭಾವಿ ಮೊದಲ ಹಂತ, ಬನಶಂಕರಿ, ಬಿಟಿಎಂ ಲೇಔಟ್'ನಲ್ಲಿ ಒಟ್ಟು 2888 ಎಕರೆಯನ್ನು ಬಿಡಿಎ ಸ್ವಾಧೀನ ಪಡಿಸಿಕೊಂಡಿತ್ತು. ಈಗ ಸ್ವಾಧೀನ ಪಡಿಸಿಕೊಂಡ ಭೂಮಿಯ ಪತ್ತೆ ಕಾರ್ಯಕ್ಕೆ ಬಿಡಿಎ ಮುಂದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.