
ಮೈಸೂರು[ಆ.26]: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಧ್ಯಂತರ ಚುನಾವಣೆ ಬಂದರೆ ಎದುರಿಸಲು ಸಜ್ಜಾಗುವಂತೆ ಪಕ್ಷದ ಮುಖಂಡರಿಗೆ ಸೂಚನೆ ನೀಡಿದ್ದಾರೆ.
ಮೈಸೂರಿನ ತಮ್ಮ ನಿವಾಸದಲ್ಲಿ ಚಾಮುಂಡೇಶ್ವರಿ ಹಾಗೂ ವರುಣ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಜೊತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಇಂದಿನ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಎದುರಾಗಬಹುದು ಎಂದ ಅವರು, ಈ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಗಮನ ನೀಡಿ ಎಂದು ಸಲಹೆ ನೀಡಿದರು.
ಈಗಾಗಲೇ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರ ಪತನದ ಬಳಿಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರದಲ್ಲಿ ಸಚಿವ ಸಂಪುಟ ಹಂಚಿಕೆಯ ಬೆನ್ನಲ್ಲೇ ಭಿನ್ನಾಭಿಪ್ರಾಯ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಯಾವಾಗ ಬೇಕಾದರೂ ಚುನಾವಣೆ ಬರಬಹುದು. ಇದನ್ನೇ ರಾಜಕೀಯ ವಿಶ್ಲೇಷಕರೂ ತಮ್ಮ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಪಕ್ಷದ ಮುಖಂಡರು ಸಂಘಟನೆಗೆ ಹೆಚ್ಚು ಒತ್ತು ನೀಡಬೇಕೆಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ಎಐಸಿಸಿ ವಕ್ತಾರೆ ಐಶ್ವರ್ಯ ಮಹದೇವ್ ಮತ್ತಿತರರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.