
ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಬೆಳಗಾವಿ ಅಧಿವೇಶನ ಡಿಸೆಂಬರ್ ತಿಂಗಳ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ ತಿಂಗಳಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಮುಖ್ಯಮಂತ್ರಿಗಳು ಉನ್ನತಮಟ್ಟದ ಸಭೆಯೊಂದನ್ನು ನಡೆಸಿ ದಿನಾಂಕವನ್ನು ನಿಗದಿಗೊಳಿಸಲಿದ್ದಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಳಗಾವಿಯಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸಲಾಗುವುದು. ಸುವರ್ಣಸೌಧದಲ್ಲಿ ಅಧಿವೇಶನ ನಡೆಸುವ ಸಂಬಂಧ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿಗಳು ಅಧಿಕಾರಿಗಳ ಜತೆ ಚರ್ಚಿಸಿ ದಿನಾಂಕವನ್ನು ಅಂತಿಮಗೊಳಿಸಲಿದ್ದಾರೆ.
ಸಮ್ಮಿಶ್ರ ಸರ್ಕಾರದ ಮೊದಲ ಬೆಳಗಾವಿ ಅಧಿವೇಶನ ನಡೆಸಲು ಅಗತ್ಯ ತಯಾರಿ ನಡೆಸುವಂತೆ ತಿಳಿಸಲಾಗಿದೆ. ಪ್ರತಿವರ್ಷದಂತೆ ಕೈಗೊಳ್ಳಬೇಕಾದ ಕ್ರಮಗಳನ್ನು ಅದಷ್ಟುಬೇಗ ಕೈಗೊಳ್ಳಬೇಕು. ಅಂತಿಮ ಹಂತದಲ್ಲಿ ಬಾಕಿ ಕೆಲಸ ಉಳಿಸಿಕೊಳ್ಳದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.