ಆನಂದ್ ಸಿಂಗ್ ರಾಜೀನಾಮೆ ನಂತರ ದೋಸ್ತಿ ಸರಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ಪಕ್ಕಾ ಆಗಿದೆ.
ಬೆಂಗಳೂರು[ಜು. 01] ದೋಸ್ತಿ ಸರಕಾರದ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದ ರಮೇಶ್ ಜಾರಕಿಹೊಳಿ ಅಂತಿಮವಾಗಿ ರಾಜೀನಾಮೆ ನೀಡುವುದು ಪಕ್ಕಾ ಆಗಿದೆ.
ರಾಜೀನಾಮೆ ಪತ್ರವನ್ನು ರವಾನೆ ಮಾಡಿರುವ ರಮೇಶ್ ಜಾರಿಕಿಹೊಳಿ 'ನಾನು ಗೋಕಾಕ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ’ ಎಂದು ಅಧಿಕೃತವಾಗಿ ತಿಳಿಸಿದ್ದಾರೆ. ಜುಲೈ 2 ರಂದು ರಮೇಶ್ ಜಾರಕಿಹೊಳಿ ರಾಜೀನಾಮೆ ಸಲ್ಲಿಸಲಿದ್ದಾರೆ.
ಗೌಪ್ಯ ಸ್ಥಳದಲ್ಲಿದ್ದುಕೊಂಡೆ ರಮೇಶ್ ಜಾರಕಿಹೊಳಿ ಗೇಮ್ ಪ್ಲ್ಯಾನ್
ವಿಜಯನಗರ ಶಾಸಕ ಆನಂದ್ ಸಿಂಗ್ ರಾಜೀನಾಮೆ ನಂತರ ರಾಜ್ಯ ಬಿಜೆಪಿ ಮುಖಂಡರು ರಾಜೀನಾಮೆ ಪರ್ವ ಆರಂಭವಾಗಿದೆ ಎಂದಿದ್ದರು. ಕಳೆದ 6 ತಿಂಗಳಿನಿಂದ ದೋಸ್ತಿ ಸರಕಾರದ ವಿರುದ್ಧ ಮಾತನಾಡುತ್ತಲೇ ಬಂದ ರಮೇಶ್ ಅಂತಿಮವಾಗಿ ರಾಜೀನಾಮೆ ಸಲ್ಲಿಕೆಯ ದೃಢ ನಿರ್ಧಾರ ಮಾಡಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ಪತ್ರ ಇಲ್ಲಿದೆ..