ಕರ್ನಾಟಕದ ಹೆಮ್ಮೆ ಕೆಎಲ್‌ಇ; ಕಾಶ್ಮೀರದಲ್ಲಿಯೂ ತಲೆ ಎತ್ತಲಿದೆ!

By Kannadaprabha NewsFirst Published Aug 16, 2019, 11:04 AM IST
Highlights

ದೇಶದ ಕಿರೀಟದಂತಿರುವ ಕಾಶ್ಮೀರ ಇದೀಗ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಶೀಘ್ರದಲ್ಲಿಯೇ ಕೆಎಲ್‌ಇ ಸಂಸ್ಥೆಯಿಂದ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದ್ದಾರೆ

ಚಿಕ್ಕೋಡಿ (ಆ. 16):  ದೇಶದ ಕಿರೀಟದಂತಿರುವ ಕಾಶ್ಮೀರ ಇದೀಗ ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ಶೀಘ್ರದ ಲ್ಲಿಯೇ ಕೆಎಲ್‌ಇ ಸಂಸ್ಥೆಯಿಂದ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕೆಎಲ್‌ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ೭೩ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮೋದಿ ಪ್ರಧಾನಿ ಆದ ಬಳಿಕ ಅಭಿವೃದ್ಧಿ ಪರ್ವ ಆರಂಭವಾಗಿದೆ ಎಂದರು.

click me!