ಟಿಬಿ ಡ್ಯಾಂ ಭರ್ತಿ ಆಗಲೆಂದು ಇಂದಿನಿಂದ ರೆಡ್ಡಿ ಉಪವಾಸ

Published : Jun 22, 2019, 08:37 AM IST
ಟಿಬಿ ಡ್ಯಾಂ ಭರ್ತಿ ಆಗಲೆಂದು  ಇಂದಿನಿಂದ ರೆಡ್ಡಿ ಉಪವಾಸ

ಸಾರಾಂಶ

ರಾಜ್ಯದಲ್ಲಿ ಮಳೆ ಅಭಾವ  | ಟಿ ಬಿ ಡ್ಯಾಂ ತುಂಬಲೆಂದು ಬಳ್ಳಾರಿ ಶಾಸಕ ಸೋಮಶೇಖರ್ ರೆಡ್ಡಿ ಇಂದಿನಿಂದ ಉಪವಾಸ | 

ಬಳ್ಳಾರಿ (ಜೂ. 22): ರಾಜ್ಯದಲ್ಲಿ ಅತ್ಯುತ್ತಮ ಮಳೆಯಾಗಿ ತುಂಗಭದ್ರಾ ಜಲಾಶಯ ಭರ್ತಿಯಾಗಲಿ ಎಂದು ದೇವರನ್ನು ಪ್ರಾರ್ಥಿಸಿ ಬಳ್ಳಾರಿ ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಶನಿವಾರದಿಂದ ಉಪವಾಸ ವ್ರತ ಆರಂಭಿಸಲಿದ್ದಾರೆ.

ನಗರದಲ್ಲಿ ಶುಕ್ರವಾರ ಹುಟ್ಟುಹಬ್ಬ ಆಚರಿಸಿಕೊಂಡ ರೆಡ್ಡಿ, ರೈತರು ಹಾಗೂ ಸಾರ್ವಜನಿಕರಿಗೆ ಒಳಿತಾಗಲಿ ಎಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ, ಶ್ರೀ ಹನುಮಾನ್‌ ದೇವರಲ್ಲಿ ಹರಕೆ ಹೊತ್ತು ಉಪವಾಸ ವ್ರತ ಕೈಗೊಳ್ಳಲಿದ್ದಾರೆ.

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ರೆಡ್ಡಿ, ನೀರಿಲ್ಲದೇ ರೈತರು, ಜನರು ತೀವ್ರ ಕಂಗಾಲಾಗಿದ್ದಾರೆ. ಹೀಗಾಗಿ ಜಲಾಶಯ ಭರ್ತಿಯಾಗಬೇಕು, ತುಂಬಿಹರಿಯಬೇಕು ಎಂದು ಹನುಮಾನ್‌ ದೇವರಲ್ಲಿ ಹರಕೆ ಹೊತ್ತಿರುವುದಾಗಿ ತಿಳಿಸಿದರು.

ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಮಾತನಾಡಿ, ನನ್ನ ಸೋದರ ಸೋಮಶೇಖರ ರೆಡ್ಡಿ ಚಿಕ್ಕಂದಿನಿಂದಲೂ ಹನುಮಾನ್‌ ದೇವರ ಭಕ್ತರಾಗಿದ್ದಾರೆ. 2009ರಲ್ಲಿ ತುಂಗಭದ್ರಾ ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರಿಲ್ಲದೇ ರೈತರು ಸಮಸ್ಯೆ ಎದುರಿಸುತ್ತಿದ್ದಾಗ 18 ದಿನಗಳ ಕಾಲ ಉಪವಾಸ ಮಾಡಿದ್ದರು. ಆಗ ಮಳೆ ಬಂದು ಜಲಾಶಯವು ಭರ್ತಿಯಾಗಿದ್ದು, ಈಗಲೂ ಅವರ ಸಂಕಲ್ಪ ಈಡೇರಲಿ ಎಂದು ಹಾರೈಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್