ಕಾಂಗ್ರೆಸ್’ನತ್ತ ಮುಖ ಮಾಡಿದ ಬೇಳೂರು ಗೋಪಾಲಕೃಷ್ಣ

Published : Apr 21, 2018, 08:17 AM IST
ಕಾಂಗ್ರೆಸ್’ನತ್ತ ಮುಖ ಮಾಡಿದ ಬೇಳೂರು ಗೋಪಾಲಕೃಷ್ಣ

ಸಾರಾಂಶ

ಬಿಜೆಪಿ ಟಿಕೆಟ್ ಸಿಗದೆ ಮುನಿಸಿಕೊಂಡಿರುವ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದು, ಶನಿವಾರ ಬೆಂಗಳೂರಿನಲ್ಲಿ ಸಿಎಂರನ್ನು ಭೇಟಿಯಾಗಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ

ಶಿವಮೊಗ್ಗ: ಬಿಜೆಪಿ ಟಿಕೆಟ್ ಸಿಗದೆ ಮುನಿಸಿಕೊಂಡಿರುವ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದು, ಶನಿವಾರ ಬೆಂಗಳೂರಿನಲ್ಲಿ ಸಿಎಂರನ್ನು ಭೇಟಿಯಾಗಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಾಗರದಿಂದ ಕಣಕ್ಕಿಳಿದಿರುವ ಹರತಾಳು ಹಾಲಪ್ಪ ಅವರನ್ನು ಸೋಲಿಸಲು ಪಣತೊಟ್ಟಿರುವ ಬೇಳೂರು ಅವರು ಈ ಹಿಂದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ್ದರು.

ಆದರೆ, ಈಗ ಕಾಂಗ್ರೆಸ್ ಅಭ್ಯರ್ಥಿ, ತಮ್ಮ ಸೋದರ ಮಾವ ಕಾಗೋಡು ತಿಮ್ಮಪ್ಪ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೇಳೂರು ಶುಕ್ರವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಮುಂದಾಗಿದ್ದರಾದರೂ, ಅದು ಸಾಧ್ಯವಾಗಿರಲಿಲ್ಲ.

ಈಗ ಶನಿವಾರ ಸಿಎಂ ಸಿದ್ದರಾಮಯ್ಯ ಬೇಳೂರು ಭೇಟಿಗೆ ದಿನಾಂಕ ನಿಗದಿಯಾಗಿದೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಆಸ್ತಿ ಮನೆ ಇಲ್ಲ, ವಾಹನ ಇಲ್ಲ, ಕೈಯಲ್ಲಿದೆ 84 ರೂ, ವಿಧಾನಸಭೆ ಚುನಾವಣೆ ಅಚ್ಚರಿ ಅಭ್ಯರ್ಥಿ
ನಾವು ಕೊಟ್ಟ ಹಣ ವಾಪಾಸ್‌ ಕೊಡಿ, ಯುಎಇ ಬೇಡಿಕೆ ಕೇಳಿ ಕಕ್ಕಾಬಿಕ್ಕಿಯಾದ ಪಾಕಿಸ್ತಾನ