
ಶಿವಮೊಗ್ಗ (ಮಾ. 31): ಸಾಗರದಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರವಾಗಿ ಬೇಳೂರು ಗೋಪಾಲಕೃಷ್ಣ V/S ಹರತಾಳು ಹಾಲಪ್ಪ ನಡುವೆ ಸ್ಪರ್ಧೆ ಏರ್ಪಟ್ಟಿದೆ.
ಸಾಗರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಬಗ್ಗೆ ಮಾಹಿತಿ ಇಲ್ಲ ಎಂದು ಬೇಳೂರು ಗೋಪಾಲ ಕೃಷ್ಣ ಹೇಳಿದ್ದಾರೆ. ನನಗೆ ಟಿಕೆಟ್ ಕೊಟ್ಟರೂ, ಕೊಡದಿದ್ದರೂ ಬಿಜೆಪಿ ಪಕ್ಷದಲ್ಲೆ ಇರುತ್ತೇನೆ. ಹರತಾಳು ಹಾಲಪ್ಪಗೆ ಟಿಕೆಟ್ ಕೊಟ್ಟರೂ ಅವರ ಪರ ಕೆಲಸ ಮಾಡುತ್ತೇನೆ. ಬೇಳೂರು ನಿಂತ ನೀರಲ್ಲ, ಹಾಗಾಗಿ ಬೇರೆ ಪಕ್ಷದವರು ಕರೆಯುತ್ತಿದ್ದಾರೆ ಎಂದಿದ್ದಾರೆ.
ಸಾಗರದಲ್ಲಿ ಸಮೀಕ್ಷೆ ಆಧಾರದ ಮೇಲೆ ಟಿಕೆಟ್ ನೀಡುವುದಾಗಿ ಹೇಳಿದ್ದಾರೆ. ಬೇಳೂರು ಗೋಪಾಲಕೃಷ್ಣ ಸ್ನೇಹಮಯಿ, ಯಾರಿಗೂ ದುಷ್ಮನ್ ಅಲ್ಲ. ನನಗೆ ಟಿಕೆಟ್ ಕೊಟ್ಟರೂ ಕೊಡದಿದ್ದರೂ ಬಿಜೆಪಿ ಪಕ್ಷದಲ್ಲೇ ಇರುತ್ತೇನೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.