
ಕೋಲ್ಕತ್ತಾ(ಜು.09): ಲೋಕಸಭಾ ಚುನಾವಣೆಯಲ್ಲಿ ಪ.ಬಂಗಾಳದಲ್ಲಿ ಪಕ್ಷ ಹೀನಾಯ ಸೋಲು ಕಂಡ ಪರಿಣಾಮ, ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸೋಮೆನ್ ಮಿತ್ರಾ ರಾಜೀನಾಮೆ ಸಲ್ಲಿಸಿದ್ದಾರೆ.
ಚುನಾವಣೆಯಲ್ಲಿ ಕಳಪೆ ಸಾಧನೆಯ ಜವಾಬ್ದಾರಿ ಹೊತ್ತು ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸೋಮೆನ್ ಮಿತ್ರಾ ಸ್ಪಷ್ಟಪಡಿಸಿದ್ದಾರೆ.
ಆದರೆ ಸೋಮೆನ್ ಮಿತ್ರಾ ರಾಜೀನಾಮೆಯನ್ನು ರಾಜ್ಯದ ಉಸ್ತುವಾರಿ ಗೌರವ್ ಗೊಗೊಯ್ ಮಿತ್ರಾ ಸ್ವೀಕರಿಸಿಲ್ಲ. ಸೋಮೆನ್ ರಾಜೀನಾಮೆಯನ್ನು ತಿರಸ್ಕರಿಸಿರುವ ಗೌರವ್, ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ 42 ಲೋಕಸಭಾ ಸ್ಥಾನಗಳ ಪೈಕಿ, ಕಾಂಗ್ರೆಸ್ ಕೇವಲ ಎರಡು ಸ್ಥಾನಗಳಲ್ಲಷ್ಟೇ ಗೆಲುವು ಸಾಧಿಸಿತ್ತು. ಚುನಾವಣಾ ಸೋಲಿನ ಹಿನ್ನೆಲೆಯಲ್ಲಿ ಈಗಾಗಲೇ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಇದೀಗ ರಾಜೀನಾಮೆ ಪರ್ವ ಪ್ರಾರಂಭವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.