ಏರ್ ಶೋ ಅಗ್ನಿ ಅವಘಡ : ಮೊದಲೇ ಸಿಕ್ಕಿತ್ತು ಎಚ್ಚರಿಕೆ

By Web DeskFirst Published Feb 26, 2019, 7:31 AM IST
Highlights

ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾ ಶೋಗೆ ಪ್ರಮುಖ ಕಾರಣವಾಗಿದ್ದು, ನಿರ್ಲಕ್ಷ್ಯ ಎನ್ನಲಾಗಿದೆ. ಸುರಕ್ಷತಾ ಕ್ರಮಗಳನ್ನು ಅನುಸರಿಸದ ಬಗ್ಗೆ ಮೊದಲೇ ಎಚ್ಚರಿಕೆ ನೀಡಲಾಗಿತ್ತು. 

ಬೆಂಗಳೂರು : ಏರ್ ಶೋ ಪ್ರದರ್ಶನದ ಸಮೀಪ ಪಾರ್ಕಿಂಗ್ ಮಾಡುವ ಬಗ್ಗೆ ಆಯೋಜಕರು ಮಾಹಿತಿ ನೀಡಿರಲಿಲ್ಲ. ಅಷ್ಟು ಮಾತ್ರವಲ್ಲ ಪ್ರದರ್ಶನದ ಮಳಿಗೆಗಳಲ್ಲಿ ಕೆಲವೊಂದು ಮುಂಜಾಗೃತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು ಎಂಬುದು ತಿಳಿದು ಬಂದಿದೆ.

ಡಿಜಿಪಿ ಕೇಂದ್ರ ಕಚೇರಿಯಲ್ಲಿ ನಡೆದ ಪೊಲೀಸ್ ಮಹಾ ಸಮಾವೇಶದಲ್ಲಿ ಅಗ್ನಿಶಾಮಕದ ದಳ ಎಡಿಜಿಪಿ ಸುನೀಲ್ ಅಗರ್‌ವಾಲ್ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರ ಬಳಿ ಅವಘಡದ ಬಗ್ಗೆ ಮಾಹಿತಿ ನೀಡಿದ್ದು, ಪರೋಕ್ಷವಾಗಿ ಆಯೋಜಕರ ನಿರ್ಲಕ್ಷ್ಯದ ಬಗ್ಗೆ ವಿವರಿಸಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.

ಜ.19ರಂದು ಸ್ಥಳಕ್ಕೆ ಭೇಟಿ ನೀಡಿ ಅಗ್ನಿ ಅವಘಡದ ಸುರಕ್ಷತಾ ಕ್ರಮದ ಬಗ್ಗೆ ಮುಂಜಾಗೃತೆ ವಹಿಸಿಲ್ಲ ಎಂದು ಆಯೋಜಕರಿಗೆ ನೋಟಿಸ್ ಜಾರಿ ಮಾಡಲಾಗಿತ್ತು ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು ಎಂದು ಮೂಲಗಳು ಹೇಳಿವೆ.

click me!