ಬೆಂಗಳೂರಲ್ಲಿ ಪ್ರಿಯತಮೆ ಆತ್ಮಹತ್ಯೆ..ಪ್ರಿಯಕರನಿಗೆ ಏನಾಯ್ತು?

Published : Jun 27, 2018, 06:14 PM ISTUpdated : Jun 27, 2018, 06:15 PM IST
ಬೆಂಗಳೂರಲ್ಲಿ ಪ್ರಿಯತಮೆ ಆತ್ಮಹತ್ಯೆ..ಪ್ರಿಯಕರನಿಗೆ ಏನಾಯ್ತು?

ಸಾರಾಂಶ

ಮದುವೆಯಾಗುತ್ತೇನೆ ಎಂದು ನಂಬಿಸಿ ಪ್ರಿಯಕರ  ಕೈ ಕೊಟ್ಟಿದ್ದಕ್ಕೆ ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಂಚಕನನ್ನು ಜನರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.  

ಬೆಂಗಳೂರು [ಜೂ.27] ಪ್ರಿಯಕರ ಬೇರೆ ಯುವತಿಯನ್ನು ಮದುವೆಯಾಗುತ್ತಿದ್ದಾನೆ ಎಂದು ತಿಳಿದ ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಶಂವತಪುರದ ನಿವಾಸಿ ಸುಪ್ರಿಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ

ಸುಪ್ರಿಯಾಗೆ ಕರೆ ಮಾಡಿದ ಶರತ್ ತಾನು ಬೇರೆ ಹುಡುಗಿಯನ್ನು ಮದುವೆಯಾಗುತ್ತಿರುವುದಾಗಿ ತಿಳಿಸಿದ್ದಾನೆ. ಇದನ್ನು ಅರಗಿಸಿಕೊಳ್ಳಲಾಗದೇ ಪ್ರಾಣ ತ್ಯಾಗ ಮಾಡುವ ನಿರ್ಧಾರಕ್ಕೆ ಬಂದಿದ್ದಾಳೆ.

ತನ್ನ  ತಾಯಿಗೆ‌ ಪ್ರೀತಿಯ ವಿಚಾರ ಹೇಳಲಾಗದೇ ಮೊಬೈಲ್ ನಲ್ಲಿ‌ ಆಡಿಯೋ ರೆಕಾರ್ಡ್ ಮಾಡಿದ್ದ ಸುಪ್ರಿಯಾ ಸಂಜೆ ಮನೆಯ ಟೆರೆಸ್‌ಗೆ ತೆರಳಿ ವಿಷ ಸೇವಿಸಿದ್ದಾಳೆ.  ನಂತರ ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗದೆ ಬೆಳಗಿನ ಜಾವ ಸಾವನ್ನಪ್ಪಿದ್ದಾಳೆ.

ಮೋಸಗಾರ ಶರತ್‌ಗೆ ಗೂಸಾ: ಸುಪ್ರಿಯಾಳನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಶರತ್ ಇದೀಗ ಪೊಲೀಸ್ ಠಾಣೆಯಲ್ಲಿದ್ದಾನೆ. ಶರತ್‌ನನ್ನು ಹಿಡಿದ ಯಶವಂತಪುರ ಜನರು ಗೂಸಾ ನೀಡಿ ಪೊಲೀರಿಗೆ ಒಪ್ಪಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದ ಬೀಡಿಗೆ ಫಿದಾ ಆದ ರಷ್ಯನ್ನರು, ಒಂದು ಪ್ಯಾಕೆಟ್‌ ಇಷ್ಟು ದುಬಾರಿನಾ?
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!