
ಬೆಂಗಳೂರು (ಮಾ. 29): ಐತಿಹಾಸಿಕ ಬೆಂಗಳೂರು ಕರಗ ಉತ್ಸವದಲ್ಲಿ ಕರಗ ಮಾರ್ಗ ಬದಲಾವಣೆ ಮಾಡುವ ಸಾಧ್ಯತೆ ಇದೆ. ಕರಗ ಸಾಗುವ ಅವೆನ್ಯೂ ರಸ್ತೆಯಲ್ಲಿ ಜಲ ಮಂಡಳಿ ಕಾಮಗಾರಿ ನಡೆಯುತ್ತಿರುವ ಹಿನ್ನಲೆಯಲ್ಲಿ ಮಾರ್ಚ್ 31 ರೊಳಗೆ ಕಾಮಗಾರಿ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಹೀಗಾಗಿ ಬೆಂಗಳೂರು ಕರಗ ಮಾರ್ಗ ಬದಲಾವಣೆ ಮಾಡುವ ಸಾಧ್ಯತೆ ಇದೆ.
ಪ್ರತಿ ವರ್ಷ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಹೊರಟ ಮೆರವಣಿಗೆ ಹಲಸೂರು ಪೇಟೆ, ಆಂಜನೇಯಸ್ವಾಮಿ , ಪ್ರಸನ್ನ ಗಂಗಾಧರೇಶ್ವರ ಸ್ವಾಮಿ ದೇವಸ್ಥಾನ, ಕಬ್ಬನ್ ಪೇಟೆ ರಾಮಸೇವಾ ಮಂದಿರ ಇನ್ನಿತರ ಕಡೆ ಪೂಜೆ ಸಲ್ಲಿಸಿ ಪುನಃ ಧರ್ಮರಾಯ ದೇವಸ್ಥಾನಕ್ಕೆ ತಲುಪುತ್ತಿತ್ತು. ಆದರೆ ಕರಗ ಸಾಗುವ ಅವೆನ್ಯೂ ರಸ್ತೆ ಅಗೆದು ಹಾಕಲಾಗಿದೆ. ಕಾಮಗಾರಿ ಪೂರ್ಣಗೊಳ್ಳದಿದ್ದರೆ, ಮಾರ್ಗ ಬದಲಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.