
ಬೆಂಗಳೂರು, (ನ.12): ಅನಾರೋಗ್ಯದಿಂದ ಇಂದು [ಸೋಮವಾರ] ನಿಧನರಾದ ಕೇಂದ್ರ ಸಚಿವ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಇಂದು [ಸೋಮವಾರ] ಬೆಂಗಳೂರಿಗೆ ಆಗಮಿಸಲಿದ್ದಾರೆ.
Live Updates: ಕೇಂದ್ರ ಸಚಿವ ಅನಂತ ಕುಮಾರ್ ಇನ್ನಿಲ್ಲ
ಇಂದು ರಾತ್ರಿ 7.30ಕ್ಕೆ ಪ್ರಧಾನಿ ಮೋದಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದು, ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಮುಂಚೆ ನರೇಂದ್ರ ಮೋದಿ ಅವರು ನೇಳೆ [ಮಂಗಳವಾರ] ಬರುತ್ತಾರೆ ಎಂದು ಹೇಳಲಾಗಿತ್ತು. ಆದರೆ ಮೋದಿ ಅವರ ಪ್ರವಾಸ ವೇಳೆಪಟ್ಟಿಯಲ್ಲಿ ಪರಿಷ್ಕೃತವಾಗಿದ್ದು, ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಮೋದಿ ಮಾತ್ರವಲ್ಲದೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜನಾಥ್ ಸಿಂಗ್ ಹಾಗೂ ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ಕೂಡ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಇಂದು ಇಡಿ ದಿನ ಅನಂತಕುಮಾರ್ ಪಾರ್ಥಿವ ಶರೀರವನ್ನ ಬಸವನಗುಡಿಯಲ್ಲಿರುವ ಅವರ ನಿವಾಸದಲ್ಲಿ ಇರಿಸಲು ನಿರ್ಧರಿಸಲಾಗಿದೆ. ಹಿನ್ನಲೆಯಲ್ಲಿ ಈ ಎಲ್ಲಾ ನಾಯಕರು ಬಸವನಗುಡಿಗೆ ತೆರಳಿ ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.
ಬಳಿಕ ಪುನಃ ಸೋಮವಾರ ರಾತ್ರಿಯೇ ನವದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ. ನಾಳೆ [ಮಂಗಳವಾರ] ಮಧ್ಯಾಹ್ನ 1ಗಂಟೆಗೆ ಚಾಮರಾಜಪೇಟೆಯ ಚಿತಗಾರದಲ್ಲಿ ಅನಂತಕುಮಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ