
ಬೆಂಗಳೂರು (ಆ. 11): ಓದುವ ಹವ್ಯಾಸ ಇತ್ತೀಚಿಗೆ ಜನರಲ್ಲಿ ಕಡಿಮೆಯಾಗುತ್ತಿದೆ. ಓದುವ ಹವ್ಯಾಸವನ್ನು ಉತ್ತೇಜಿಸಲು ಅಕ್ಟೋಬರ್ 15 ರಿಂದ 21 ರವರೆಗೆ ಒಟ್ಟು 7 ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ಬೆಂಗಳೂರು- ಪುಸ್ತಕೋತ್ಸವ- 2018 ಆಯೋಜಿಸಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರೊ. ಎಸ್ ಜಿ ಸಿದ್ದರಾಮಯ್ಯ ಹೇಳಿದ್ದಾರೆ.
ಪುಸ್ತಕೋತ್ಸವಕ್ಕೆ ಮೊದಲಿನಿಂದಲೂ ಮಾಹಿತಿ ತಂತ್ರಜ್ಞಾನ, ಜೈವಿಲ ತಂತ್ರಜ್ಞಾನದ ಉದ್ಯೋಗಿಗಳು ಮತ್ತು ಆಂಗ್ಲ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ, ಕಾವ್ಯ, ಪರಂಪರೆ ಇತ್ಯಾದಿಗಳನ್ನು ಪರಿಚಯಿಸಬೇಕೆಂಬುದು ಈ ಉತ್ಸವದ ಆಶಯವಾಗಿದೆ. ಮೂರು ದಿನಗಳ ಕಾಲ ಕನ್ನಡ ಸಾಹಿತ್ಯೋತ್ಸವವನ್ನುಇದೇ ಸಂದರ್ಭದಲ್ಲಿ ಆಯೋಜಿಸಲಾಗುತ್ತಿದೆ. ಈ ಉತ್ಸವದಲ್ಲಿ ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ ನೀಡಿದ ಸಾಹಿತಿಗಳು ಭಾಗವಹಿಸುತ್ತಿರುವುದು ವಿಶೇಷವಾಗಿದೆ ಎಂದು ಎಸ್ ಜಿ ಸಿದ್ದರಾಮಯ್ಯ ಹೇಳಿದ್ದಾರೆ.
350 ಮಳಿಗೆಗಳಲ್ಲಿ ಶೇ. 15 ರಿಂದ ಶೇ. 50 ರಿಯಾಯಿತಿ ದರಗಳಲ್ಲಿ ಕನ್ನಡ ಭಾಷೆಗಳ ಪುಸ್ತಕಗಳು ಮಾರಾಟಕ್ಕೆ ಲಭ್ಯವಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.