
ಮೈಸೂರು (ಜ.24): ಅಧಿಕಾರಕ್ಕಾಗಿ ಮೀಸಲಾತಿಯನ್ನು ಬದಲಾಯಿಸಿದರೂ ಮೈಸೂರು ನಗರ ಪಾಲಿಕೆ ಮೇಯರ್ ಪಟ್ಟ 'ಕೈ' ತಪ್ಪಿದ್ದು, ಸಿಎಂ ತವರು ಜಿಲ್ಲೆಯಲ್ಲೇ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ನಗರ ಪಾಲಿಕೆಯಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಮುಂದುವರೆದಿದೆ.
ಮೈಸೂರು ಪಾಲಿಕೆ ಮೇಯರ್ ಆಗಿ ಭಾಗ್ಯವತಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಆಗಿ ಜೆಡಿಎಸ್'ನ ಇಂದಿರಾ ಮಹೇಶ್ ಅವಿರೋಧ ಆಯ್ಕೆಯಾಗಿದ್ದಾರೆ. ಮೀಸಲಾತಿ ಲಾಭ ಪಡೆಯಲು ಹೊರಟ ಕಾಂಗ್ರೆಸ್'ಗೆ ಜೆಡಿಎಸ್- ಬಿಜೆಪಿಯಿಂದ ಪಾಠ ಕಲಿಸಿದೆ. ಸಿಎಂ ತವರು ಜಿಲ್ಲೆಯಲ್ಲಿ ಕಾಂಗ್ರೆಸ್'ಗೆ ಭಾರೀ ಮುಖಭಂಗವಾಗಿದೆ.
ಭಾಗ್ಯವತಿ ವಿರುದ್ಧವಾಗಿ ಒಂದೂ ಮತ ಬಿದ್ದಿಲ್ಲ. ತಟಸ್ಥವಾಗಿ ಕೂಡ ಒಂದೂ ಮತವಿಲ್ಲ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಪಾಲಿಕೆಯಲ್ಲಿ ಹೈ ಡ್ರಾಮದ ನಡುವೆಯೂ ಜೆಡಿಎಸ್ ಅಧಿಕಾರ ಹಿಡಿದಿದೆ. ನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ನಗರಪಾಲಿಕೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರೆದಿದೆ.
ನಿನ್ನೆ ಭಾಗ್ಯವತಿ ನಾಪತ್ತೆಯಾಗಿದ್ದರು. ಇಂದು ಮುಂಜಾನೆ ಜೆಡಿಎಸ್ ಸದಸ್ಯರೊಂದಿಗೆ ಬಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಬಂಡಾಯ ಅಭ್ಯರ್ಥಿ ಭಾಗ್ಯವತಿ ನಾಮಪತ್ರ ಸಲ್ಲಿಸಿದ ನಂತರ ಕಮಲಾ ಎನ್ನುವವರು ನಾಮಪತ್ರ ಸಲ್ಲಿಸಿದರು. ನಿನ್ನೆ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಮುಖಂಡರು ಚುನಾವಣಾ ಪೂರ್ವ ಸಭೆ ನಡೆಸಿದ್ದರು. ಸಭೆಗೆ ಭಾಗ್ಯವತಿ ಗೈರು ಹಾಜರಾಗಿದ್ದರು. ಭಾಗ್ಯವತಿ ಪರವಾಗಿ ಪತಿ ಸುಬ್ರಹ್ಮಣ್ಯ ಸಭೆಗೆ ಹಾಜರಾಗಿದ್ದರು. ಚುನಾವಣೆ ಮುಗಿಯುವವರೆಗೂ ನಿಮ್ಮೊಂದಿಗೆ ಇರುತ್ತೇವೆ. ಭಾಗ್ಯವತಿ ಆಸ್ಪತ್ರೆಗೆ ಹೋಗಿದ್ದಾರೆ ಎಂದು ಸಭೆಯಲ್ಲಿ ಸುಬ್ರಹ್ಮಣ್ಯ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.