
ನವದೆಹಲಿ: ಶಿಕ್ಷಣ ಮತ್ತು ಉದ್ಯೋಗದಲ್ಲಿ ಜಾತಿ ಆಧಾರಿತ ಮೀಸಲಾತಿ ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಭಾರತ್ ಬಂದ್‌ಗೆ ಕರೆ ನೀಡಿವೆ.
ಏ.2ರಂದು ದಲಿತ ಪರ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ವೇಳೆ ವ್ಯಾಪಕ ಹಿಂಸಾಚಾರ ನಡೆದು 10ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಇಂತಹ ಯಾವುದೇ ಅಹಿತರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ.
ಒಂದು ವೇಳೆ ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಹಿಂಸಾಚಾರ ನಡೆದರೆ ಅದಕ್ಕೆ ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಗಳನ್ನು ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಗೃಹ ಸಚಿವಾಲಯ ತಿಳಿಸಿದೆ.
ಜಾಟ್, ಗುಜ್ಜರ್, ಬ್ರಾಹ್ಮಣ ಮತ್ತು ರಜಪೂತರನ್ನು ಒಳಗೊಂಡ ‘ಸರ್ವ ಸಮಾಜ್’ ಸಂಘಟನೆ ಮಂಗಳವಾರದ ಬಂದ್‌ಗೆ ಕರೆ ನೀಡಿದೆ. ಈ ಸಂಬಂಧ ‘ಏಪ್ರಿಲ್ 10 ಭಾರತ್ ಬಂದ್ ಸಂಘರ್ಷ ಸಮಿತಿ’ಯನ್ನು ರಚಿಸಲಾಗಿದೆ. ಸಾಮಾಜಿಕ ಜಾಲತಾಣಗಳು ಮತ್ತು ವಾಟ್ಸಪ್‌ನಲ್ಲಿ ಬಂದ್ ಬಗ್ಗೆ ಪ್ರಚಾರ ಮಾಡಲಾಗುತ್ತಿದೆ. ಎಸ್‌ಸಿ/ಎಸ್‌ಟಿ ಕಾಯ್ದೆಯನ್ನು ದುರ್ಬಲಗೊಳಿಸಿದ್ದರ ವಿರುದ್ಧ ಏ.2ರಂದು ಕರೆ ನೀಡಿದ ಬಂದ್‌ಗೆ ವಿರುದ್ಧವಾಗಿ ಭಾರತ್ ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಸೂಕ್ಷ್ಮ ಸ್ಥಳಗಳಲ್ಲಿ ಕಾವಲನ್ನು ಹೆಚ್ಚಿಸುವಂತೆ ಮತ್ತು ಯಾವುದೇ ಜೀವ ಹಾನಿ ನಡೆಯುವುದನ್ನು ತಡೆಯುವಂತೆ ಸೂಚನೆ ರಾಜ್ಯಗಳಿಗೆ ಸಲಹೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.