ಭಾರತ್ ಬಂದ್ : ಪೆಟ್ರೋಲ್, ಡೀಸೆಲ್ ಸಿಗುತ್ತಾ..?

Published : Jan 07, 2019, 01:14 PM IST
ಭಾರತ್ ಬಂದ್ : ಪೆಟ್ರೋಲ್, ಡೀಸೆಲ್ ಸಿಗುತ್ತಾ..?

ಸಾರಾಂಶ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ 2 ದಿನ ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಈ ಬಂದ್ ನಿಂದ ಪೆಟ್ರೋಲ್, ಡೀಸೆಲ್ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು ಅಸೋಸಿಯೇಷನ್ ಅಧ್ಯಕ್ಷರು ತಿಳಿಸಿದ್ದಾರೆ. 

ಬೆಂಗಳೂರು : ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ, ಕಾರ್ಮಿಕರ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿ ಯು) ಜ.8 ಮತ್ತು 9ರಂದು ಕರೆ ನೀಡಿರುವ ‘ಭಾರತ್ ಬಂದ್’ನಿಂದಾಗಿ ರಾಜ್ಯದಲ್ಲೂ ಕೆಲ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. 

ಬಂದ್ ಗೆ ಕೇವಲ ನೈತಿಕ ಬೆಂಬಲ ನೀಡುತ್ತೇವೆ. ಆದರೆ ಯಾವುದೇ ಪೆಟ್ರೋಲ್ ಬಂಕ್ ಗಳನ್ನೂ ಬಂದ್ ಮಾಡುವುದಿಲ್ಲ ಎಂದು ಪೆಟ್ರೋಲ್ ಬಂಕ್ ಅಸೋಸಿಯೇಷನ್ ಹೇಳಿದೆ. 

ನಾಳೆ ಭಾರತ್ ಬಂದ್ : ಶಾಲಾ-ಕಾಲೇಜುಗಳಿಗೆ ಇರುತ್ತಾ ರಜೆ..?

ದೇಶದಲ್ಲಿ 2 ದಿನಗಳ ಬಂದ್ ಇದ್ದರೂ ಎಲ್ಲಾ ಬಂಕ್ ಗಳಲ್ಲಿ ಪೆಟ್ರೋಲ್ ಲಭ್ಯವಾಗಲಿದೆ.  ಸಾರ್ವಜನಿಕರಿಗೆ ಅನಾನುಕೂಲ ಆಗಬಾರದು ಎಂದು ನೈತಿಕ ಬೆಂಬಲ ಮಾತ್ರ ನೀಡಲಾಗುತ್ತದೆ ಎಂದು ಪೆಟ್ರೋಲ್ ಬಂಕ್ ಅಸೋಸಿಯೇಷನ್ ಅಧ್ಯಕ್ಷ ರವಿ ಹೇಳಿದ್ದಾರೆ. 

ನಾಳೆ, ನಾಡಿದ್ದು ಭಾರತ್ ಬಂದ್ : ಏನಿರುತ್ತೆ..? ಏನಿರಲ್ಲ..?

ಪ್ರೈವೇಟ್ ವಾಹನಗಳಿಂದ ನೈತಿಕ ಬೆಂಬಲ : ಇನ್ನು ಭಾರತ್ ಬಂದ್ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ನೈತಿಕ ಬೆಂಬಲವಷ್ಟೇ ನೀಡಲಾಗುತ್ತದೆ. ಆದರೆ ಸಂಚಾರ ನಿಲ್ಲಿಸುವುದಿಲ್ಲ. ರಾಜ್ಯದೆಲ್ಲೆಡೆ ಖಾಸಗಿ ಬಸ್ ಗಳ ಸಂಚಾರ ಇರಲಿದೆ ಎಂದು ಸುವರ್ಣ ನ್ಯೂಸ್. ಕಾಂ ಗೆ  ಖಾಸಗಿ ಬಸ್ ಅಸೋಸಿಯೇಷನ್ ಅಧ್ಯಕ್ಷ ಸತ್ಯ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

16 ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ, ಸತ್ತ ಸರ್ಕಾರದ ಮುಖ್ಯಮಂತ್ರಿ: ಪ್ರತಾಪ್ ಸಿಂಹ ವಾಗ್ದಾಳಿ
ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ