
ನವದೆಹಲಿ (ಏ. 02): ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ದುರ್ಬಲಗೊಳಿಸಿರುವ ಸುಪ್ರೀಂಕೋರ್ಟ್ ಆದೇಶ ಖಂಡಿಸಿ ಇಂದು ದಲಿತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದ್ದವು. ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ.
ಮಧ್ಯಪ್ರದೇಶದ ಮೊರೆನಾದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಪ್ರತಿಭಟನೆಯ ಕಾವು ಹೆಚ್ಚಾಗಿದ್ದು ಗುಜರಾತ್, ಪಂಜಾಬ್, ಉತ್ತರ ಪ್ರದೇಶದಲ್ಲಿ 144 ಜಾರಿಗೊಳಿಸಲಾಗಿದೆ.
ಉತ್ತರಪ್ರದೇಶ, ಮಧ್ಯಪ್ರದೇಶ, ರಾಜಸ್ತಾನ, ಪಂಜಾಬ್ ಸೇರಿದಂತೆ 7 ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ, ಕಾರುರು ಸಿಕ್ಕಸಿಕ್ಕ ಕಡೆ ಬೆಂಕಿ ಹಚ್ಚಲಾಗಿದೆ. ಪೊಲೀಸರು ಲಾಠಿ ಚಾರ್ಜ್ ನಡೆಸಿದ್ರೂ ಪರಿಸ್ಥಿತಿ ಮಾತ್ರ ಹತೋಟಿಗೆ ಬಂದಿಲ್ಲ. ಬೀದಿಗಿಳಿದ ದಲಿತ ಸಂಘಟನೆಗಳು ಸುಪ್ರೀಂಕೋರ್ಟ್ ಆದೇಶ ವಾಪಸ್ಗೆ ಪಟ್ಟು ಹಿಡಿದಿದ್ದಾರೆ.
ಎಸ್ಸಿ/ ಎಸ್ಟಿ ದೌರ್ಜನ್ಯ ಕಾಯ್ದೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದನ್ನು ತಡೆಗಟ್ಟಲು, ಆರೋಪಗಳು ಸುಳ್ಳಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳುವುದಕ್ಕಾಗಿ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಮಾ.20 ರಂದು ಆದೇಶ ನೀಡಿತ್ತು. ಈ ಆದೇಶವನ್ನು ದಲಿತ ಸಂಘಟನೆಗಳು ಪ್ರಶ್ನಿಸಿದ್ದು, ಭಾರತ್ ಬಂದ್ ಗೆ ಕರೆ ನೀಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.